ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ.ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಸ್ನೇಹಮಯಿ ಕೃಷ್ಣ ಹಾಜರಾಗಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೊಟೀಸ್ ನೀಡಿತ್ತು. ಕಚೇರಿಗೆ ಹಾಜರಾಗುವುದಕ್ಕೂ ಮುನ್ನ ಮಾತನಾಡಿದ ಅವರು, ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ದಾಖಲೆ ಕೇಳಿದ್ದರು. ಆಸ್ತಿ ಪತ್ರ, ಅಕೌಂಟ್ ಡೀಟೆಲ್ಸ್, ಆದಾಯದ ಮಾಹಿತಿ ಕೇಳಿದ್ದಾರೆ. ಅದರ ಸಂಬಂಧ ದಾಖಲೆ ಸಮೇತ ವಿಚಾರಣೆಗೆ ಬರೋಕೆ ಹೇಳಿದ್ರು..ಇ.ಡಿ ಅಧಿಕಾರಿಗಳ ತನಿಖೆ ಪ್ರಕಾರ ಮೊದಲು ದೂರುದಾರರ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಾರೆ.
ಹೀಗಾಗಿ ಮೊದಲು ನನ್ನ ವಿಚಾರಣೆಗೆ ಕರೆದಿದ್ದಾರೆ ಎಂದಿದ್ದಾರೆ.500ಪುಟಗಳ ದಾಖಲೆಗಳನ್ನ ಸಲ್ಲಿಸಿ ವಿಚಾರಣೆಗೆ ಹಾಜರಾಗ್ತಿದೀನಿ.. ಕೇಸ್ ಹಿಂದೆ ಕಾಣದ ಕೈಗಳು ಇದ್ಯಾ ಅನ್ನೋ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ ಇಲ್ಲಿ ಸಿಎಂ ವಿರುದ್ಧ ಹೋರಾಡಲು ಯಾರಾದರೇನು..? ಎಂದಿದ್ದಾರೆ.