ಬೆಂಗಳೂರು: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತಿ ಮಹಾಸ್ವಾಮಿಗಳವರ 50ನೇ ವರ್ಷದ ಸನ್ಯಾಸ ಸ್ವೀಕಾರದ ಅಂಗವಾಗಿ ವೇದಾಂತ ಭಾರತಿ ಶಂಕರ ತತ್ವ ಪ್ರಸಾರ ಅಭಿಯಾನ ಮತ್ತು ಮಿಥಿಕ್ ಸೊಸೈಟಿ ಸಹಯೋಗದೊಂದಿಗೆ ಬೃಹತ್ “ನಮ ಶಿವಾಯ” ಮಹಾಅಭಿಯಾನ ಮಹಾ ಸಮರ್ಪಣೆ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬರುವ ಶನಿವಾರ 26ರಂದು ನಡೆಯಲಿದೆ.
ಈ ಕುರಿತಂತೆ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವೇದಾಂತ ಭಾರತಿ ಟ್ರಸ್ಟಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಎಸ್.ಎಸ್.ನಾಗನಂದ, ಈ ವರ್ಷದಲ್ಲಿ ರಾಜ್ಯಾದ್ಯಂತ ಕಲ್ಯಾಣ ವೃಷ್ಟಿ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ, ಈ ಅಭಿಯಾನದಲ್ಲಿ ಶ್ರೀ ಶಂಕರಭಗವತ್ಪಾದರು ರಚಿಸಿದ ಕಲ್ಯಾಣ ವೃಷ್ಟಿಸ್ತವ,
ಶಿವ ಪಂಚಾಕ್ಷರ ನಕ್ಷತ್ರಾಮಾಲಾಸ್ತೋತ್ರ ಹಾಗೂ ಲಕ್ಷ್ಮೀ ನರಸಿಂಹಕರುಣಾಸಸ್ತೋತ್ರ ಎಂಬ ಮೂರು ಸ್ತೋತ್ರಗಳನ್ನು ಉಚಿತವಾಗಿ ಸಮಸ್ತ ಆಸ್ತಿಕರಿಗೆ ಹೇಳಿಕೊಡಲಾಗುತ್ತದೆ,ಬೆಂಗಳೂರು ನಗರದ ಸಹಸ್ರಾರು ಪರಾಯಣ ಕೇಂದ್ರಗಳಿಂದ ಒಂದು ಲಕ್ಷಕ್ಕೂ ಹೆಚ್ಚಿನ ಆಸ್ತಿಕರು ಮತ್ತು ವಿದ್ಯಾಸಂಸ್ಥೆಗಳಲ್ಲಿ ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು ಎರಡು ಲಕ್ಷಕ್ಕೂ ಹೆಚ್ಚಿನ ಜನರಿಗೆ ಸ್ತೋತ್ರಗಳನ್ನು ಅಭ್ಯಾಸ ಮಾಡಿಸಲಾಗಿದೆ, ಈ ಅಭಿಯಾನದಲ್ಲಿ ವಿದ್ಯಾರ್ಥಿಗಳು,
ಪೌರಕಾರ್ಮಿಕರು, ದಿವ್ಯಾಂಗರು, ದೃಷ್ಟಿಹೀನರು, ಹಿರಿಯ ನಾಗರಿಕರು ಎಲ್ಲರೂ ಏಕ ಕಂಠದಿಂದ ಸ್ತೋತ್ರ ಸಮರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ನಮ ಶಿವಾಯ ಆಸ್ತಿಕರಿಗೆ ಕುಳಿತುಕೊಳ್ಳಲು ವಿಶಾಲವಾದ ಪೆಂಡಲ್ ವ್ಯವಸ್ಥೆ, ಬಿಸ್ಕತ್ ಮತ್ತು ಹಾಲಿನ ವ್ಯವಸ್ಥೆ, ಬೋಜನದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಯೋಗಾನಂದೇಶ್ವರ ಸರಸ್ವತಿ ಮಠದ ಶಂಕರ ಭಾರತೀ ಸ್ವಾಮೀಜಿ, ಬ್ರಹ್ಮಾನಂದ ಭಾರತಿ ಸ್ವಾಮೀಜಿ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ,ವಿ.ಸೋಮಣ್ಣ ಭಾಗವಹಿಸಲಿದ್ದು, ಶೃಂಗೇರಿಯ ಜಗದ್ಗುರು ಶಂಕರಾಚಾರ್ಯ ವಿಧುಶೇಖರ ಭಾರತೀ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.