ಬೆಂಗಳೂರು: ನಗರ ಪೊಲೀಸ್ ಆಯುಕ್ತ ದಯಾನಂದರವರು ಸೋಮವಾರ ನಡೆಯಲಿರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಸಂಬಂಧ ಪಟ್ಟಂತೆ ಸೌಹಾರ್ದ ಸಭೆಯನ್ನು ಎಲ್ಲಾ ಪೊಲೀಸ್ ಠಾಣಾ ಮಟ್ಟದಲ್ಲಿ ನಡೆಸಬೇಕೆಂದು ಸಂಬಂಧಪಟ್ಟ ಠಾಣಾ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 110 ಪೊಲೀಸ್ ಠಾಣೆ ಹೊಂದಿರುವ ಬೃಹತ್ ಬೆಂಗಳೂರು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸಿ ಸಿ ಕ್ಯಾಮೆರಾ ಗಳನ್ನು ಹಾಗೂ ಸಾರ್ವಜನಿಕರನ್ನು ಸಹ ಉಪಯೋಗಿಸಿಕೊಳ್ಳಬೇಕೆಂದು ಸಲಹೆ ಮಾಡಿದ್ದಾರೆ.
ಬೆಂಗಳೂರು ನಗರದಲ್ಲಿ ಇನ್ನು ಎರಡು ಮೂರು ದಿನ ಗಣೇಶ ಉತ್ಸವಗಳು ನಡೆಯುವುದರಿಂದ ಹೆಚ್ಚಿನ ಕಣ್ಗಾವಲು ವಹಿಸಬೇಕೆಂದು ಆದೇಶಿಸಿರುವುದಾಗಿ ತಿಳಿಸಿದ್ದಾರೆ.ನಗರದ ಎಲ್ಲಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಳು ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಕೂಡಲೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಎಚ್ಚರ ವಹಿಸಬೇಕೆಂದು ಆದೇಶಿಸಿದರು.