ಚಿಕ್ಕಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಚಿಕ್ಕಬಳ್ಳಾಪುರ ಹಾಗೂ ಸೌಮ್ಯ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ 77ನೇ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಉಚಿತ ಕಣ್ಣಿನ ತಪಾಸಣೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರು ಅಂಬಿಕ ಮತ್ತು ಪದಾಧಿಕಾರಿಗಳು ನಡೆಸಿಕೊಟ್ಟರು,
ಪ್ರಾಸ್ತಾವಿಕವಾಗಿ ತಾಲೂಕಿನ ಯೋಜನಾಧಿಕಾರಿಯಾದ ಧನಂಜಯ್ ಮಾತನಾಡುತ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಅನೇಕ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿದ್ದು ಯಶಸ್ವಿಯಾಗಿ ಮುಂದುವರೆಯುತ್ತಿವೆ, ಇದರಲ್ಲಿ ಮುಖ್ಯವಾಗಿ ಮಾಶಾಸನ ವಿತರಣ ಕಾರ್ಯಕ್ರಮ, ನಿರ್ಗತಿಕ ಮತ್ತು ಅಶಕ್ತ ಕುಟುಂಬಗಳನ್ನು ಗುರುತಿಸಿ, ಅವರಿಗೆ ಪ್ರತಿ ತಿಂಗಳು 1000 ಮಾಶಾಸನ ನೀಡಲಾಗುತ್ತಿದೆ ತಾಲೂಕಿನಲ್ಲಿ 82 ಜನ ಅಶಕ್ತರಿಗೆ ಈ ಸೌಲಭ್ಯ ನೀಡಲಾಗಿದೆ,ಮತ್ತು ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ವೃತ್ತಿ ಶಿಕ್ಷಣ ಕೋರ್ಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿದಿ ಶಿಷ್ಯವೇತನ, ಪ್ರತಿ ವರ್ಷ ತಾಲೂಕಿನಲ್ಲಿ ಒಂದು ಕೆರೆಯ ಹೂಳು ತೆಗೆದು ಅಭಿವೃದ್ಧಿಪಡಿಸುವ ಕೆಲಸ, ಹಾಲು ಉತ್ಪಾದಕರ ಕಟ್ಟಡ ನಿರ್ಮಾಣಕ್ಕೆ ಅನುದಾನ ದೇವಸ್ಥಾನಗಳ ಪುನಶ್ಚೇತನಕ್ಕೆ ಅನುದಾನಗಳನ್ನು ವಿಶೇಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿಯವರು ನೀಡುತ್ತಿದ್ದಾರೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡುತ್ತಾ ಧರ್ಮಸ್ಥಳದ ಧರ್ಮಾಧಿಕಾರಿಯವರ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ
ಹಮ್ಮಿಕೊಳ್ಳಲಾಗಿದೆ ಸ್ವಸಹಾಯ ಸಂಘದ ಸದಸ್ಯರು ಸ್ವಯಂ ಪ್ರೇರಿತರಾಗಿ 40 ದೇವಸ್ಥಾನಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ ಎಂದು ತಿಳಿಸಿದರು.
ಸೌಮ್ಯ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿಗಳಾದ ಗಾಯತ್ರಿ ಮತ್ತು ವಿಶ್ವನಾಥ್ ಮಾತನಾಡುತ್ತಾ ಕಣ್ಣಿನ ಆರೋಗ್ಯ ರಕ್ಷಣೆ, ಕಣ್ಣಿನ ಸಮಸ್ಯೆಗಳ ಬಗ್ಗೆ ಮಾಹಿತಿ
ನೀಡಿದರು ಮತ್ತು ಆಗಮಿಸಿದ ಎಲ್ಲಾ ಫಲಾನುಭವಿಗಳ ಕಣ್ಣಿನ ತಪಾಸಣೆಯನ್ನು ನಡೆಸಿಕೊಟ್ಟರು. ಆಗಮಿಸಿದ ಎಲ್ಲರನ್ನು ಗುರುಮೂರ್ತಿ ರವರು ಸ್ವಾಗತಿಸಿ, ಮಂಜುನಾಥ್ ರವರು ನಿರೂಪಣೆ ಮಾಡಿದರು, ಮಧು ಧನ್ಯವಾದ ಗೈದರು.