ಮಹಾಕುಂಭ ಮೇಳದಲ್ಲಿ ರಾತ್ರೋರಾತ್ರಿ ಫೇಮಸ್ ಆಗಿದ್ದ ಐಐಟಿ ಬಾಬಾ ಹೇಳಿದ್ದ ಭಾರತ- ಪಾಕಿಸ್ತಾನ ಪಂದ್ಯದ ಫಲಿತಾಂಶ ಇದೀಗ ಉಲ್ಟಾ ಆಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತವನ್ನು ಸೋಲಿಸಲಿದೆ. ಇದೇ ನಿಜ ಎಂದು ಅವರು ಭವಿಷ್ಯ ನುಡಿದಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು. ಆದರೆ ಇದೀಗ ಅವರ ಭವಿಷ್ಯವಾಣಿ ಸಂಪೂರ್ಣ ಸುಳ್ಳಾಗಿದೆ.
ಹೀಗಾಗಿ ಅವರು ಮತ್ತೆ ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ. ಹಿಮಾಚಲದಲ್ಲಿ ಶೇಕಡಾ 100, ಹರ್ಯಾಣದಲ್ಲಿ ಶೇ 73 ಮತ್ತು ಜಮ್ಮು ಕಾಶ್ಮೀರದಲ್ಲಿ ಶೇ 71ರಷ್ಟು ಅವರ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಆಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 6 ವಿಕೆಟ್ ಗಳಿಂದ ಭರ್ಜರಿಯಾಗಿ ಬಗ್ಗು ಬಡಿಯಿತು.
ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಶತಕ ಬಾರಿಸುವ ಮೂಲಕ ಪ್ರದರ್ಶಿಸಿ ಭಾರತವನ್ನು ವಿಜಯದ ದಡ ತಲುಪಿಸಿದರು. ಇದೀಗ ನೆಟ್ಟಿಗರು ಐಐಟಿ ಬಾಬಾ ನ ಭವಿಷ್ಯದ ಬಗ್ಗೆ ಅಪಹಾಸ್ಯ ಮಾಡಲು ಪ್ರಾರಂಭಿಸಿದ್ದಾರೆ.