ನವದೆಹಲಿ: ಜುಲೈನಿಂದ ಸೆಪ್ಟೆಂಬರ್ವರೆಗಿನ ಕ್ವಾರ್ಟರ್ನಲ್ಲಿ ಜಿಡಿಪಿ ಶೇ. 5.4ರಷ್ಟು ಬೆಳೆದಿರಿವುದು ನಿರೀಕ್ಷೆಗಿಂತ ಬಹಳ ಕಡಿಮೆ ಮಟ್ಟದ್ದಾಗಿದೆ. ಈ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎರಡನೇ ಕ್ವಾರ್ಟರ್ನ ಜಿಡಿಪಿ ಬೆಳವಣಿಗೆ ಕುಂಠಿತಗೊಂಡಿರುವುದು ತಾತ್ಕಾಲಿಕ ಹಿನ್ನಡೆ ಮಾತ್ರ. ಮುಂಬರುವ ತ್ರೈಮಾಸಿಕ ಅವಧಿಗಳಲ್ಲಿ ಆರ್ಥಿಕತೆ ಉತ್ತಮ ರೀತಿಯಲ್ಲಿ ಬೆಳೆಯುತ್ತದೆ ಎಂದಿದ್ದಾರೆ.
ಭಾರತದ ಬೆಳವಣಿಗೆಯಲ್ಲಿ ಸ್ಥಿರತೆ ಇದೆ. ಕಳೆದ ಮೂರು ವರ್ಷದಲ್ಲಿ ಜಿಡಿಪಿ ದರ ಸರಾಸರಿಯಾಗಿ ಶೇ. 8.3ರಷ್ಟಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳ ಪೈಕಿ ಭಾರತವೇ ಅತಿವೇಗ ಹೊಂದಿರುವುದು ಎಂದು ಹೇಳಿದ ಅವರು, ಎರಡನೇ ತ್ರೈಮಾಸಿಕ ಅವಧಿಯಲ್ಲಿನ ಆರ್ಥಿಕ ಬೆಳವಣಿಗೆ ದರ ತಾತ್ಕಾಲಿಕ ಹಿನ್ನಡೆ ಮಾತ್ರವೇ ಆಗಿದೆ ಎಂದು ವಾದಿಸಿದ್ದಾರೆ.