ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೇವನಹಳ್ಳಿ ಟೋಲ್ ಪ್ಲಾಜಾ ಟೋಲ್ ಸಂಗ್ರಹದಲ್ಲಿ ಬರೋಬ್ಬರಿ ಶೇ 185ರಷ್ಟು ಹೆಚ್ಚಳವಾದ ಬೆನ್ನಲ್ಲೇ ಇದೀಗ ಆ ಕುರಿತು ಚರ್ಚೆ ಆರಂಭವಾಗಿದೆ. ದೇವನಹಳ್ಳಿ ಟೋಲ್ ಪ್ಲಾಜಾ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈಕಿ ಧ್ವನಿಯೆತ್ತಿದ್ದು, ಅದನ್ನು ಏರ್ಪೋರ್ಟ್ ನಂತರ ಬಳ್ಳಾರಿ ರಸ್ತೆಗೆ ಸ್ಥಳಾಂತರಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ನಿತಿನ್ ಗಡ್ಕರಿ ಅವರನ್ನು ಟ್ಯಾಗ್ ಮಾಡಿ ಸಂದೇಶ ಪ್ರಕಟಿಸಿರುವ ಮೋಹನ್ ದಾಸ್ ಪೈ, ಬೆಂಗಳೂರಿಗೆ ಮಾತ್ರ ಏಕೆ ಈ ತಾರತಮ್ಯ ಎಂದು ಪ್ರಶ್ನಿಸಿದ್ದಾರೆ.