ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 5 ಇನಿಂಗ್ಸ್ ಆಡಿದ್ದ ರೋಹಿತ್ ಶರ್ಮಾ ಕಲೆಹಾಕಿದ್ದು ಕೇವಲ 31 ರನ್ಗಳು ಮಾತ್ರ. ಅಂದರೆ ಕೇವಲ 6.20 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದರು. ಹೀಗಾಗಿಯೇ ಟೀಮ್ ಇಂಡಿಯಾ ಆಟಗಾರರು ರಣಜಿ ಟೂರ್ನಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಅದರಂತೆ ಇದೀಗ ಮುಂಬೈ ಪರ ಕಣಕ್ಕಿಳಿದಿರುವ ರೋಹಿತ್ ಶರ್ಮಾ ಒಂದಂಕಿ ರನ್ಗೆ ಸುಸ್ತಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಇದೀಗ ರಣಜಿ ಟೂರ್ನಿಯಲ್ಲೂ ಅದೇ ಕಥೆಯನ್ನು ಮುಂದುವರೆಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಜಮ್ಮು-ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರುವ ಹಿಟ್?ಮ್ಯಾನ್ ಕೇವಲ 3 ರನ್ಗಳಿಸಿ ಔಟಾಗಿದ್ದಾರೆ.