ಬೆಳಗಾವಿ: ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಒಂದು ದಿನ ಮೊಟಕು ಗೊಳಿಸುವ ಸಾಧ್ಯತೆ ಎಂದು ಹೇಳಲಾಗಿದೆ.
ಡಿ.20ರಿಂದ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಅಧಿವೇಶನ ಒಂದು ದಿನದ ಮೊದಲೇ ಅಂತ್ಯ ಗೊಳ್ಳಲಿದೆ.
ಸಿಎಂ, ಡಿಸಿಎಂ ಆದಿಯಾಗಿ ಸಚಿವರು ಸಮ್ಮೇಳನದಲ್ಲಿ ಭಾಗಿಯಾಗಬೇಕಿರುವ ಕಾರಣ ಮೊಟಕುಗೊಳಿಸಲಾಗಿದೆ.ಡಿ.20ರ ಬದಲಿಗೆ 19ಕ್ಕೆ ಅಧಿವೇಶನ ಕೊನೆಗೊಳ್ಳಲಿದ್ದು, ಇಂದು ಮಧ್ಯಾಹ್ನ ನಡೆಯುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಸರ್ಕಾರ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.