ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಪಕ್ಷದ ರಾಷ್ಟ್ರೀಯ ನಾಯಕರು ವಿರೋಧಿಸಿದ್ದಾರೆ,
ಇದನ್ನು ಜಾರಿಗೊಳಿಸುವುದು ದುಸ್ಸಾಧ್ಯ, ಕೆಲವು ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ, ಕೆಲವು ಕಡೆ ಚುನಾವಣೆ ನಡೆದು ಒಂದೂವರೆ ವರ್ಷ-ಎರಡೂವರೆ ವರ್ಷ ಆಗಿದೆ, ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದು ಎಂದು ತಿಳಿಸಿದ್ದಾರೆ.