ಹೊಸ ತಂಡದೊಂದಿಗೆ “congratulations ಬ್ರದರ್ “”ಅಲೆಮಾರಿ” ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರ ನಿರ್ದೇಶಿಸಿರುವ ಹರಿ ಸಂತೋಷ್, ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ನೆರವೇರಿತು. ಕೆ.ವಿ.ಎನ್ ಪ್ರೊ ಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್ ಹಾಗೂ ರವಿಕುಮಾರ್ ಪೋಸ್ಟರ್ ಅನಾವರಣ ಮಾಡುವ ಮೂಲಕ ನೂತನ ಚಿತ್ರಗಳಿಗೆ ಚಾಲನೆ ನೀಡಿದರು.
ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಮೊದಲು “ಡಿಸ್ಕೋ” ತಂಡದ ಸದಸ್ಯರು ಮಾತನಾಡಿದರು. “ಡಿಸ್ಕೋ” ಇದು ನಾಯಕನ ಅಡ್ಡ ಹೆಸರು ಎಂದು ಮಾತು ಆರಂಭಿಸಿದ ನಿರ್ದೇಶಕ ಹರಿ ಸಂತೋಷ್, ವಿಕ್ಕಿ ವರುಣ್ ಈ ಚಿತ್ರದ ನಾಯಕ. ನನ್ನ ಹಾಗೂ ವಿಕ್ಕಿ ವರಣ್ ಕಾಂಬಿನೇಶನ್ ನಲ್ಲಿ “ಕಾಲೇಜ್ ಕುಮಾರ” ಚಿತ್ರದ ನಂತರ ಈ ಚಿತ್ರ ಮೂಡಿಬರುತ್ತಿದೆ. ಇದೊಂದು ಹಳ್ಳಿಯಲ್ಲಿ ನಡೆಯುವ ಕಥೆ.
ನಮ್ಮ ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಕಲ್ಲೂರ್ ಸಿನಿಮಾಸ್ ಬ್ಯನಾರ್ ನಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಪ್ರಶಾಂತ್ ಕಲ್ಲೂರ್ ಹಾಗೂ ಹರೀಶ್ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಧ್ರುವ್ ಸಂಗೀತ ನೀಡಲಿದ್ದಾರೆ. ಇಂದು ಚಿತ್ರಕ್ಕೆ ಚಾಲನೆ ನೀಡಿದ ಗಣ್ಯರಿಗೆ ಧನ್ಯವಾದ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಹೇಳಿದರು.
ಇದು ನಾನು ನಾಯಕನಾಗಿ ನಟಿಸುತ್ತಿರುವ ನಾಲ್ಕನೇ ಚಿತ್ರ. ಹಿಂದಿನ ಮೂರು ಚಿತ್ರಗಳೆ ಬೇರೆ ತರಹ. ಇದೇ ಬೇರೆ ತರಹ. ನಾನು ಹೇಗೆ ಇದ್ದಿನೊ ಅದೇ ತರಹ ಪಾತ್ರ ಎನ್ನಬಹುದು. ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಇದು ಹಳ್ಳಿಯಿಂದ ಸಿಟಿಗೆ ಬಂದ ಹುಡುಗನ ಕಥೆ ಅಲ್ಲ. ಹಳ್ಳಿಯನ್ನೇ ಸಿಟಿ ಮಾಡಲು ಹೊರಟ ಹುಡುಗನ ಕಥೆ. ಹರಿ ಸಂತೋಷ್ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ ಎಂದರು ನಾಯಕ ವಿಕ್ಕಿ ವರುಣ್. ಸಹ ನಿರ್ಮಾಪಕರಾದ ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ಸಂಗೀತ ನಿರ್ದೇಶಕ ಧ್ರುವ್ “ಡಿಸ್ಕೊ” ಚಿತ್ರದ ಬಗ್ಗೆ ಮಾತನಾಡಿದರು.