ದೊಡ್ಡಬಳ್ಳಾಪುರ: ಕರ್ನಾಟಕ ನಾಟಕ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ತಾಲ್ಲೂಕಿನ ಕಂಟನಕುಂಟೆ ಗ್ರಾಮದ ಕೆ.ಎಂ.ಕೃಷ್ಣಮೂರ್ತಿ ಆಯ್ಕೆಯಾಗಿದ್ದಾರೆ.
ಪೌರಾಣಿಕ, ಐತಿಹಾಸಿಕ ಹಾಗೂ ಸಾಮಾಜಿಕ ನಾಟಕಗಳಲ್ಲಿ ಅವರ ಅಭಿನಯ ಹಾಗೂ ಕಲಾ ಸೇವೆ ಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ. ತಾಲ್ಲೂಕು, ಜಿಲ್ಲಾ ಮಟ್ಟದಲ್ಲೂ ಕಲಾ ಸೇವೆಯನ್ನು ಗುರುತಿಸಿ ಅಭಿ- ನಂದಿಸಲಾಗಿದೆ. ತಾಲ್ಲೂಕು ಹಾಗೂ ಜಿಲ್ಲಾ ಕಲಾವಿದರ ಸಂಘದಲ್ಲೂ ಗೌರವ ಅಧ್ಯಕ್ಷರಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಂತಸ ಹಂಚಿಕೊಂಡಿರುವ ಕೃಷ್ಣಮೂರ್ತಿ ಅವರು ‘9ನೇ ತರಗತಿಯಲ್ಲಿದ್ದಾಗಲೆ ‘ಧಾನಶೂರ ಕರ್ಣ’ ಪೌರಾಣಿಕ ನಾಟಕದಲ್ಲಿ ಸಖಿಯ ಪಾತ್ರದ ಮೂಲಕ ರಂಗ ಪಯಣ ಪಯಣ ಆರಂಭವಾಯಿತು. ಇಲ್ಲಿಯವರೆಗೆ ಸುಮಾರು 300ಕ್ಕೂ ಹೆಚ್ಚಿನ ನಾಟಕಗಳಲ್ಲಿ ಕರ್ಣ, ಅರ್ಜುನ, ಅಂಜನೇಯನ ಪಾತ್ರಗಳಿಗೆ ಬಣ್ಣ ಹಚ್ಚಿದ್ದೇನೆ. ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರ ಸೇರಿದಂತೆ ರಾಜ್ಯದ ದಕ್ಷಿಣ ಭಾಗದ ಹಲವಾರು ಜಿಲ್ಲೆಗಳಲ್ಲಿನ ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದೇನೆ’ ಎಂದು ತಿಳಿಸಿದರು.