ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್ಬೈಜಾನ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಹಾರುತ್ತಿತ್ತು. ವಿಮಾನದಲ್ಲಿ 105 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಕಜಾಕ್ ಮಾಧ್ಯಮ ವರದಿ ಮಾಡಿದೆ. ಅಪಘಾತದ ಬಗ್ಗೆ ಅಜೆರ್ಬೈಜಾನ್ ಏರ್ಲೈನ್ಸ್ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಅಪಘಾತದ ಕಾರಣದ ಬಗ್ಗೆ ತನಿಖೆ ಮುಂದುವರೆದಿದೆ. ಎಷ್ಟು ಮಂದಿ ಬದುಕುಳಿದಿದ್ದಾರೆ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.