ಬೆಂಗಳೂರು: ಕನ್ನಡ ಉಳಿಸಿ ಬೆಳೆಸಲು ಕನ್ನಡ ಮನಸ್ಸುಗಳ ಅವಶ್ಯಕತೆ ಇದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ತಿಳಿಸಿದರು.
ಬೆಂಗಳೂರು ನಗರದ ದೊಮ್ಮಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಕನ್ನಡ ಜಾನಪದ ಪರಿಷತ್ ಶಾಂತಿನಗರ ಮಹಿಳಾ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ನಮ್ಮ ಭಾಷೆಯ ಬಗ್ಗೆ ನಮಗೆ ಹೆಮ್ಮೆಯಿರಲಿ. ಕನ್ನಡ ನಾಡು, ನುಡಿ, ಪರಂಪರೆ, ಸಂಸ್ಕöÈತಿಯನ್ನು ಎಂದೆದಿAಗೂ ಮರೆಯದಿರೋಣ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಅಡಿವಪ್ಪ ಮಾತನಾಡಿ ಸಂಸ್ಕöÈತ ಭಾಷೆ ಹೊರತುಪಡಿಸಿದರೆ ಪ್ರಾಚೀನ ಕಾಲದ ಅತಿ ಶ್ರೀಮಂತ ಭಾಷೆ ಎಂದರೆ ಅದು ಕನ್ನಡ. ಇತರೆ ಭಾಷೆಗಳಿಗೆ ಗೌರವ ನೀಡೋಣ ಕನ್ನಡ ಭಾಷೆಗೆ ಅಭಿಮಾನ ವ್ಯಕ್ತಪಡಿಸೋಣ ಎಂದು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ ಪುನೀತ್ ಹಾಗೂ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಕು.ದಿವಾಕರ್ ಹಾಗೂ ಕುಮಾರಿ ದರ್ಶನಿ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಶಾಂತಿನಗರ ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಹೇಮಾ ಮಾಲಿನಿ ಅವರಿಗೆ ರಾಜ್ಯಾಧ್ಯಕ್ಷರಾದ ಬಾಲಾಜಿ ರವರು ಪರಿಷತ್ ಧ್ವಜವನ್ನು ಹಸ್ತಾಂತರಿಸಿದರು. ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ವಿಶೇಷವಾಗಿ ಏರ್ಪಡಿಸಲಾಗಿತ್ತು.
ರಾಮನಗರ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಕೆ. ಸಿ. ಕಾಂತಪ್ಪ, ಸಹಾಯಕ ಪ್ರಾಧ್ಯಾಪಕ ಡಾ ಶಿವರಾಜ್, ಡಾ ಶ್ರೀಕಾಂತ್, ಡಾ ಆಶಾ, ಪ್ರೊ ಶಶಿಕಾಲ, ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.