ಬೆಂಗಳೂರು: ಇದೇ ತಿಂಗಳು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ನಾಡೋಜ
ಗೊ.ರು. ಚನ್ನಬಸಪ್ಪ ರವರ ಅಭಿನಂದನ ಸಮಾರಂಭದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ವತಿಯಿಂದ ಶಾಲು ಹೊದಿಸಿ ಹೂಗುಚ್ಛ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ನಾಡೋಜ ಡಾ. ಗೊ.ರು. ಚನ್ನಬಸಪ್ಪರವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಪ್ರಥಮ ರಾಜ್ಯಮಟ್ಟದ ಕನ್ನಡ ಜಾನಪದ ಸಮ್ಮೇಳನದ ಲಾಂಛನವನ್ನು ಅನಾವರಣಗೊಳಿಸಿ ಅವರು ಸಮ್ಮೇಳನಕ್ಕೆ ಶುಭ ಹಾರೈಸಿದರು.
ಈ ವೇಳೆ ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷರಾದ ಪಾಲನೇತ್ರರವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ನರಸಿಂಹಮೂರ್ತಿ, ಕನ್ನಡ ಜಾನಪದ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಅಂಬಿಕಾ ರಾಜಣ್ಣ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಕಾರ್ಯದರ್ಶಿ ಕೇಶವರಾಜ್, ಪತ್ರಿಕಾ ಕಾರ್ಯದರ್ಶಿ ಶಿವಶಂಕರ್, ಗಾಯಕ ಹೆಚ್. ಎಸ್. ಜಯರಾಮ್, ಸದಸ್ಯರಾದ ಶಿವಲೀಲಾ ಸಂಗೀತ ಮತ್ತು ನೃತ್ಯ ಅಕಾಡೆಮಿ ಕಾರ್ಯದರ್ಶಿ ಮಂಜುನಾಥ್ ಮತ್ತಿತರರು ಹಾಜರಿದ್ದರು.