ಯಲಹಂಕ: ಕನ್ನಡ ಕೇವಲ ಭಾಷೆಯಲ್ಲ ನಮ್ಮ ಜೀವನಾಡಿ ಇಂತಹ ಪುಣ್ಯಭೂಮಿಯಲ್ಲಿ ಜನಿಸಿದ ಪ್ರತಿಯೊಬ್ಬರು ಪುಣ್ಯವಂತರು, ಸಾವಿರಾರು ವರ್ಷಗಳ ಇತಿಹಾಸ ಇರುವ ಈ ಪವಿತ್ರ ಭಾಷೆಯನ್ನು ನುಡಿಯುವುದೇ ಒಂದು ಅದೃಷ್ಟ,
ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿರುವ ಕನ್ನಡ ಭಾಷೆ ಅಜರಾಮರವಾಗಲಿ ಇಂದಿನ ಯುವ ಪೀಳಿಗೆ ಅನ್ಯ ಭಾಷೆಗಳಿಗೆ ಮಾರುಹೋಗದೆ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡುವುದು ಎಲ್ಲರ ಕರ್ತವ್ಯ ಎಂದು ಪಿಳ್ಳಹಳ್ಳಿ ಬಳಿಯ ಎಪಿಎಂಸಿ ಆಟೋ ಚಾಲಕರ ಹಾಗೂ ಟೆಂಪೋಚಾಲಕರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಹುಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಾ.ಬಿ ರಮೇಶ್ ಮಾತನಾಡಿದರು.
ಅದ್ದೂರಿಯಾಗಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನು ಆಯೋಜಿಸಿದ್ದ ಅಧ್ಯಕ್ಷ ಡಾ. ಬಿ.ರಮೇಶ್ ರವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಗೂಡ್ಸ್ ಗಾಡಿ ಚಾಲಕರ ಮತ್ತು ಮಾಲೀಕರ ಸಂಘದ ಸದ್ಯಸ್ಯರು ಸೇರಿದಂತೆ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.