ನೆಲಮಂಗಲ: ಕನ್ನಡ ಬರೀ ಭಾಷೆಯಲ್ಲ, ಅದು ನಮ್ಮ ಉಸಿರು, ಬದುಕು ಕನ್ನಡಾಂಬೆಯ ಮಕ್ಕಳಾದ ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಬೇಕೆಂದು ನಟ ವಿನೋದ್ ರಾಜ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಕಲಾ ಶಾರದೆ ದಿವಂಗತ ಡಾ. ಎಂ ಲೀಲಾವತಿ ಹಾಗೂ ಸೋಲದೇವನಹಳ್ಳಿ ಗ್ರಾ.ಪಂ. ಸದಸ್ಯರಾಗಿದ್ದ
ಯುವಕರ ಕಣ್ಮಣಿ ದಿವಂಗತ ರಾಮಕೃಷ್ಣಪ್ಪ ರವರ ಸವಿ ನೆನಪಿನೊಂದಿಗೆ ಚಾಮುಂಡಿ ನ್ಯೂಸ್ ಹಾಗೂ ಗರುಡ ಪತ್ರಿಕೆ ಸಹಯೋಗದೊಂದಿಗೆ ಅದ್ದೂರಿ ಕನ್ನಡ ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕನ್ನಡ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮ ಇದಾಗಿದೆ ಕನ್ನಡಿಗರ ಪಾಲಿನ ಅತ್ಯಂತ ಸಂಭ್ರಮ, ಸಡಗರದ ಕ್ಷಣ. ಇದು ಕರ್ನಾಟಕ ರಾಜ್ಯ ರಚನೆಯ ಐತಿಹಾಸಿಕ ದಿನ . ಇದೇ ಕಾರಣದಿಂದ ನವೆಂಬರ್ನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಅನುರಣಿಸುತ್ತಿರುತ್ತದೆ. ಹಾಗಾಗಿ ಕರ್ನಾಟಕಕ್ಕೆ ಆಗಮಿಸುವ ಅನ್ಯಭಾಷಿಗರಿಗೆ ಕನ್ನಡವನ್ನು ಕಲಿಸಿ, ನಾವು ಹೆಚ್ಚು ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಎತ್ತಿಹಿಡಿಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಚಿಕ್ಕಹನುಮೇಗೌಡ, ಪ್ರೆಸ್ ಕ್ಲಬ್ ಕೌನ್ಸಲಿಂಗ್ ತಾಲ್ಲೂಕು ಅಧ್ಯಕ್ಷ ಗಂಗಾಧರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲ್ಲೂಕು ಕಾರ್ಯದರ್ಶಿ ವೇಣುಗೋಪಾಲ್, ಸೊಲದೇವನಹಳ್ಳಿ ಮುಖಂಡ ಗೋಪಾಲಯ್ಯ, ಕೃಷ್ಣಮೂರ್ತಿ, ಗ್ರಾಪಂ ಅಧ್ಯಕ್ಷ ಸಂತೋಷ್ ನಾಯ್ಕ, ರೂಪ ನಾರಾಯಣ, ಲಕ್ಷ್ಮೀದೇವಮ್ಮ, ಕಾಂಗ್ರೆಸ್ ಮುಖಂಡ ಚನ್ನಕೇಶ, ಗ್ರಾಮ ಪಂಚಾಯಿತಿ ಸದಸ್ಯ ವೈ ಆರ್ ಶ್ರೀನಿವಾಸ್ ಹಾಗೂ ಮುಖಂಡರು ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದರು.