ರಾಮನಗರ: ವಿಶ್ವಸಂಸ್ಥೆಯಲ್ಲಿ ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿ ಸುತ್ತಿರುವ ಸಮಯದಲ್ಲಿ ಕೆಲವು ಕೇಂದ್ರ ಮತ್ತು ರಾಜ್ಯ ನಾಯಕರು ಸ್ವಾರ್ಥ ರಾಜಕೀಯ ಕಾರಣಕ್ಕೆ ಟೀಕೆ ಮಾಡುವುದು ಸರಿಯಲ್ಲ ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಕೆ.ರಾಜು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ನ ಜಿಲ್ಲಾ ಗ್ಯಾರಂಟಿ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು. ಒಂದು ವಾರದಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಧ್ಯಮಗಳಲ್ಲಿ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ಮಾರ್ಚ್ ಬಜೆಟ್ ಇರುವುದರಿಂದ ನಿಗಧಿತ ಸಮಯದಲ್ಲಿ ಹಣ ತುಂಬಲು ಅಧಿಕಾರಿಗಳಿಗೆ ಸಾದ್ಯವಾಗಿಲ್ಲ. ಮುಂದಿನ ವಾರ ಸರ್ಕಾರ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿಶ್ವ ಸಂಸ್ಥೆ ಮುಕ್ತ ಕಂಠದಿಂದ ಶ್ಲಾಘಿಸಿದೆ. ಆ ಮೂಲಕ ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬಿದಂತಾಗುತ್ತದೆ ಸಲಹೆ ನೀಡಿದೆ. ಇದು ಗೊತ್ತಿದ್ದರು ಸಹ ರಾಜಕಾರಣಿಗಳು ರಾಜಕೀಯ ಕಾರಣಗಳಿಗಾಗಿ ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ. ಆದರೆ, ಅವರದೇ ಪಕ್ಷ ಆಡಳಿತದಲ್ಲಿರುವ ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ ರಾಜ್ಯಗಳಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಅನು ನಕ್ಕೆ ತಂದಿದೆ. ಇನ್ನಾದರು ರಾಜಕೀಯ ಕಾರಣಗಳಿಗಾಗಿ ಟೀಕೆ ಮಾಡುವುದನ್ನು ಬಿಟ್ಟು ವಾಸ್ತವತೆ ಅರಿತು ಮಾತನಾಡಬೇಕು ಎಂದು ತಿರುಗೇಟು ನೀಡಿದರು.
ಕೇಂದ್ರ ಸಚಿವರು ಹಾಗೂ ಬಿಜಿಪಿ ರಾಜ್ಯ ನಾಯಕರು ಸಾಮಾನ್ಯ ತಿಳುವಳಿಕೆ ಇಲ್ಲದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಡೆತ್ಸರ್ಟಿಫಿಕೇಟ್ 5 ರು. ಇತ್ತು 50 ರುಪಾಯಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ 5 ರು. ಇದ್ದ ರಶೀದಿ ಮೊತ್ತವನ್ನು 20 ರುಪಾಯಿ ಮಾಡಿದ್ದಾರೆಂದು ಸುಳ್ಳು ಆರೋಪ ಮಾಡಿ ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ್, ತಾಲೂಕು ಅಧ್ಯಕ್ಷ ರಾದ ವಿ.ಎಚ್.ರಾಜು, ಸ್ವಾಮಿ, ಜಯಣ್ಣ, ರಂಗನಾಥ್ ಇದ್ದರು.