ಶಾಲಾ ಮಕ್ಕಳು ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ವಿಜ್ಞಾನ ವಿಷಯದಲ್ಲಿ ಉನ್ನತ ಅಧ್ಯಯನಕ್ಕೆ ಹೆಚ್ಚಿನವರು ಆಸಕ್ತಿ ತೋರುತ್ತಿಲ್ಲ. ಈ ದಿಸೆಯಲ್ಲಿ ಯುವಪೀಳಿಗೆ ಹೆಚ್ಚಿನ ಒಲವು ತೋರಬೇಕಿದೆ ಎಂದು ರಮಣಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷ ನಾಡೋಜ ಷಡಕ್ಷರಿ ತಿಳಿಸಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯ ಸರಕಾರಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಏರ್ಪ ಡಿಸಿದ್ದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಗೋವಿಂದರಾಜನಗರ ಘಟಕವನ್ನು ಉ ದ್ಘಾಟಿಸಿ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾದ ನಾ ಶ್ರೀಧರ್ ಮಾತನಾಡಿ ದೇಶದಲ್ಲಿ ಹೊಸ ಹೊಸ ತಂತ್ರಜ್ಞಾನಗಳು ಆವಿಷ್ಕಾರವಾಗುತ್ತಿದ್ದು, ಅವುಗಳ ಬಳಕೆಯ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಬೇಕು. ಶಾಲಾ ಕಾಲೇಜಿನಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್, ತ್ರಿಡಿ ತಂತ್ರಜ್ಞಾನ ಬಳಕೆ ಮಾಡಿಕೊಂಡು ವಿಶೇಷ ತರಬೇತಿ ನೀಡುವ ಮೂಲಕ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಬೇಕು ಎಂದು ಹೇಳಿದರು.
ಗೌರವ ಸನ್ಮಾನ ಸ್ವೀಕರಿಸಿದ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರ. ನರಸಿಂಹಮೂರ್ತಿ ಮಾತನಾಡಿ ಈಗ ಸರ್ಕಾರಿ ಶಾಲೆಗಳು ಉನ್ನತ ಮಟ್ಟದಲ್ಲಿ ಹೆಸರು ಮಾಡಿವೆ. ಈ ಭಾಗದ ಶಾಸಕರಾದ ಪ್ರಿಯಕಷ್ಣರವರು ಸರ್ಕಾರಿ ಶಾಲೆಗಳಿಗೆ ಅತ್ಯಾಧುನಿಕ ಶಾಲಾ ಕೊಠಡಿಗಳು, ಸ್ಮಾರ್ಟ್ ಕ್ಲಾಸ್ ರೂಮ್ ಗಳು ಹಾಗೂ ಅತ್ಯುತ್ತಮ ವಿಜ್ಞಾನದ ಪ್ರಯೋಗಾಲಯವನ್ನು ಮಾಡಿಸಿದ್ದಾರೆ. ಈ ಶಾಲೆಯಲ್ಲಿರುವ ಉತ್ತಮ ಸೌಲಭ್ಯಗಳನ್ನು ಶಾಲಾ ಶಿಕ್ಷಕರು ಉಪಯೊಗಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷ ಣ ದೊರೆಯುವಂತೆ ಸಹಕಾರಿಯಾಗ ಬೇಕು. ದಿನ ನಿತ್ಯದ ವಿಜ್ಞಾನ ವಿಸ್ಮಯಗಳನ್ನು ಅರ್ಥೈಸಿಕೊಳ್ಳುವ ಮೂಲಕ ಮಕ್ಕಳು ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಬಾಲಾಜಿ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಕರ್ನಾಟಕ ಜ್ಞಾನವಿಜ್ಞಾನ ಸಮಿತಿಯ ವತಿಯ ಗೋವಿಂದರಾಜನಗರ ಘಟಕದ ವತಿಯಿಂದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಸೈನ್ಸ್ ಲ್ಯಾಬ್ ಮೂಲಕ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಸೌಲಭ್ಯಗಳವುಳ್ಳ ಪ್ರಯೋಗಾಲಯದಲ್ಲಿ ಪರಿಕರಗಳನ್ನು ಅವರ ಕೈಯಲ್ಲಿ ನೀಡಿ ಬಳಕೆಗೆ ಪ್ರೋತ್ಸಾಹಿಸಿದಾಗ ಮಾತ್ರ ಉತ್ತಮ ಫಲಿತಾಂಶ ಬರುತ್ತದೆ. ಆ ಪ್ರಯತ್ನದಲ್ಲಿ ಉಪನ್ಯಾಸಕರು ಮುಂದಾದಾಗ ವಿಧ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ. ಲಕ್ಷ್ಮೀನರಸಿಂಹ, ಮಹಾಲಕ್ಷ್ಮೀ ಪುರಂ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಸತ್ಯಮೂರ್ತಿ, ರಾಜಾಜಿನಗರ ಘಟಕದ ಅಧ್ಯಕ್ಷ ಶಿವಸ್ವಾಮಿ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಹನುಮೇಗೌಡ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮೂರು ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಿಸಿ ಗೌರವಿಸಲಾಯಿತು. ರವಿ ಬಸವಲಿಂಗ ಕಾರ್ಯಕ್ರಮದ ನಿರೂಪಣೆ ಮಾಡಿದರು. ಉಪನ್ಯಾಸಕ ಸಂದೇಶ್ ವಂದಿಸಿದರು.