ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ (ಸಿಬಿಎಸ್ಇ & ಐಸಿಎಸ್ಇ) ಪರೀಕ್ಷೆಗಳಲ್ಲಿ ಶೇ. 85% ಕ್ಕಿಂತ ಮೇಲ್ಪಟ್ಟು ಅಂಕಗಳನ್ನು ಪಡೆದಿರುವ ಭೋವಿ ಜನಾಂಗದ ವಿದಾ-್ಯರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಪ್ರತಿ ಜಿಲ್ಲೆಯಿಂದ ತಲಾ 3 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪ್ರಥಮ ರೂ. 15,000/-, ದ್ವಿತೀಯ ರೂ. 10,000/-, ತೃತೀಯ ರೂ. 8000/- ಪ್ರೋತ್ಸಾಹ ಧನ ಹಾಗೂಪ್ರಮಾಣ ಪತ್ರ ನೀಡಲಾಗುವುದು. ವಿಶೇಷವಾಗಿ ಯಾವುದೇ ವಿಶ್ವವಿದ್ಯಾಲಯದಿಂದ ಗೋಲ್ಡ್ ಮೆಡಲ್ ಪಡೆದ ವಿದ್ಯಾರ್ಥಿಗ ರೂ. 25,000/- ಪ್ರೋತ್ಸಾಹ ಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನಾಂಕವಾಗಿರುತ್ತದೆ. ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ/ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಉಳಿತಾಯ ಖಾತೆ ಬ್ಯಾಂಕ್ ಪಾಸ್ಬುಕ್ದ ಮೊದಲ ಪುಟದ ಪ್ರತಿ (ಐಎಫ್ಎಸ್ಸಿ. ಕೋಡ್ ಪುಟವಿರುವ) ಝರಾಕ್ಸ್ ಪ್ರತಿ ಸಲ್ಲಿಸಬೇಕು. ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು, ಪೂರ್ಣ ಅಂಚೆ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನೀಡಬೇಕು.ಎಸ್ಎಸ್ಬಿ ಸಮುದಾಯ ಭವನ ಮಾದನಾಯಕನಹಳ್ಳಿ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ ತಾಲ್ಲೂಕು ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಇಲ್ಲಿ ಅರ್ಜಿ ಸಲ್ಲಿಸಬೇಕು.