ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೨೨ರ ಸಾಲಿನ ‘ವರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು ೨೦೨೧ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮರ್ತಿ, ಇಂದಿರಾ ಹೆಗ್ಗಡೆ, ರಂಜಾನ್ ರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ ೧೫ ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ ರಂಜಾನ್ ರ್ಗಾ ಸೇರಿ ೫ ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ೧೦ ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, ೧೭ ಜನರಿಗೆ ೨೦೨೧ನೆ ಪುಸ್ತಕ ಬಹುಮಾನ, ೮ ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ, ೨೦೨೨ನೆ ಸಾಲಿನ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಗೆ ಸಾಹಿತಿಗಳಾದ ಆರ್.ಕೆ.ಹುಡಗಿ, ಅಗ್ರಹಾರ ಕೃಷ್ಣಮರ್ತಿ, ಇಂದಿರಾ ಹೆಗಡೆ, ರಂಜಾನ್ ರ್ಗಾ, ತುಂಬಾಡಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ,೫೦ ಸಾವಿರ ನಗದು ಬಹುಮಾನ ಒಳಗೊಂಡಿದೆ. ಈ ಬಾರಿ ಪ್ರಶಸ್ತಿಗಳಿಗೆ ವಿಭಾಗವಾರು ಸಾಹಿತಿಗಳನ್ನು ಗುರುತಿಸಿ, ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.
೨೦೨೨ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಬಂಜಗೆರೆ ಜಯಪ್ರಕಾಶ್, ರೂಮಿ ಹರೀಶ್, ಎಂ.ಜಿ. ಮಂಜುನಾಥ, ದಾಸನೂರು ಕೂಸಣ್ಣ, ರಾಜಶೇಖರ ಹತಗುಂದಿ, ಎಚ್.ಎನ್.ಆರತಿ, ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ ಹಾಗೂ ಚಲಂ ಹಾಡ್ಲಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಐವರು, ಸೃಜನೇತರ ಸಾಹಿತ್ಯ ಕ್ಷೇತ್ರದಿಂದ ನಾಲ್ವರು ಹಾಗೂ ಸಾಹಿತ್ಯ ಪರಿಚಾರಿಕೆಗೆ ಸಂಬಂಧಿಸಿದಂತೆ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ.೨೫ ಸಾವಿರ ಒಳಗೊಂಡಿದೆ ಎಂದು ಮಾಹಿತಿ ನೀಡಿದರು.
೨೦೨೧ರ ಪುಸ್ತಕ ಬಹುಮಾನಕ್ಕೆ ವಿರ್ಶಕರ ಅಭಿಪ್ರಾಯ ಆಧರಿಸಿ ೧೭ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ರೂ.೨೫ ಸಾವಿರ ನಗದು ಬಹುಮಾನ ಒಳಗೊಂಡಿದೆ. ೨೦೨೧ರ ವಿವಿಧ ದತ್ತಿ ಬಹುಮಾನಗಳಿಗೆ ಎಂಟು ಕೃತಿಗಳು ಆಯ್ಕೆಯಾಗಿವೆ. ಡಿಸೆಂಬರ್ನಲ್ಲಿ ಕಲ್ಯಾಣ ರ್ನಾಟಕ ಅಥವಾ ಉತ್ತರ ರ್ನಾಟಕ ಪ್ರದೇಶದಲ್ಲಿ ಸಮಾರಂಭ ನಡೆಯುವ ಸಾಧ್ಯತೆಗಳಿದ್ದು, ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.