ಕಲಬುರಗಿ: ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಂಜಾರ ಸಮಾಜದ 11 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಓರ್ವ ಶಿಕ್ಷಕ ಅತ್ಯಾಚಾರ ಮಾಡಿದ್ದ ಘಟನೆ ನಡೆದಿತ್ತು. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅತ್ಯಾಚಾರ ಖಂಡಿಸಿ ಬಂಜಾರ ಸಮುದಾಯ ಬೀದಿಗಿಳಿದಿತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಕಂಡಕಂಡ ಕಡೆ ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನಲೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ರನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ್ ರಾಠೋಡ್ ಚಿತ್ತಾಪುರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ. ಹೋರಾಟದ ವೇಳೆ ಸಾರ್ವಜನಿಕ ಆಸ್ತಿ ಹಾಳು ಹಿನ್ನಲೆ ಬ್ರಹ್ಮಪೂರ ಹಾಗೂ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಸದ್ಯ ಬ್ರಹ್ಮಪೂರ ಠಾಣೆಯಲ್ಲಿ ಮಣಿಕಂಠ್ ರಾಠೋಡ್ ಸ್ಟೇಷನ್ ಬೇಲ್ ಪಡೆದಿದ್ದು, ಸ್ಟೇಷನ್ ಬಜಾರ್ ಪೊಲೀಸರು ಮತ್ತೆ ಬಂಧಿಸಿದ್ದಾರೆ.