ಬೆಂಗಳೂರು: ಜ್ಞಾನಭಾರತಿ ಪೊಲೀಸರು 4 ಜನ ಆರೋಪಿಗಳನ್ನು ಬಂಧಿಸಿ ಸುಮಾರು 11 ಲಕ್ಷ ರೂ ಬೆಲೆ ಮಾಡುವ 130 ಗ್ರಾಂ ಚಿನ್ನಾಭರಣ ಹಾಗೂ ಮೂರು ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಆರೋಪಿಗಳಾದ ಅದ್ವೈತ ಗೌಡ, ಜೈ ದೇವ್, ದೀಪಕ್ ಮತ್ತು ರಘು ಎಂಬ ಆರೋಪಿಗಳನ್ನು ಬಂಧಿಸಿರುತ್ತಾರೆ.ಈ ಆರೋಪಿಗಳು ಖಲೀದ್ ಎಂಬುವರ ಮನೆ ಬೀಗ ಮುರಿದು ಚಿನ್ನಾಭರಣ ಕಳವಾಗಿದ್ದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಈ ಸಂಬಂಧ ನಾಲ್ಕು ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕೋಣನಕುಂಟೆ, ಹನುಮಂತನಗರ, ರಾಜರಾಜೇಶ್ವರಿ ನಗರ, ಕುಂಬಳಗೋಡು ಮತ್ತು ಬ್ಯಾಡ್ರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮನೆಗಳ್ಳತನ ಹಾಗೂ ಮೋಟರ್ ಸೈಕಲ್ ಕಳ್ಳತನ ಮಾಡಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ತಿಳಿಸಿರುತ್ತಾರೆ.