ಯಲಹಂಕ: ಯಲಹಂಕ ಉಪನಗರದ ಲಯನ್ಸ್ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್, ಯಲಹಂಕ ವಿಧಾನಸಭಾ ಕ್ಷೇತ್ರ, ಇದರ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು. ಈ ಸುಂದರ ಸಮಾರಂಭಕ್ಕೆ ಯಲಹಂಕ
ಕ್ಷೇತ್ರದ ಜನಪ್ರಿಯ ಶಾಸಕರಾದ ಎಸ್.ಆರ್.ವಿಶ್ವನಾಥ್ ರವರು ಮುಖ್ಯ ಅಥಿತಿಗಳಾಗಿ ಆಗಮಿಸಿ ದೀಪ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು.
ಸುಮಂಗಲಿ ಸೇವಾಶ್ರಮದ ಶರಣೆ ಡಾ.ಎಸ್.ಜಿ.ಸುಶೀಲಮ್ಮನವರು ಧ್ವಜಾರೋಹಣ ಮಾಡಿದರು. ಕಸಾಪ ಯಲಹಂಕ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಡಾ.ಎಸ್.ಹರೀಶ್ ಅದ್ಯಕ್ಷತೆ ವಹಿಸಿದ್ದು,ಕೇಂದ್ರ ಪರಿಷತ್ತಿನ ಗೌರವಾಧ್ಯಕ್ಷರಾದ ಶ್ರೀ ನೇ.ಭ ರಾಮಲಿಂಗ ಶೆಟ್ಟಿ, ಶ್ರೀಮತಿ ಡಾ.ಪದ್ಮಿನಿ ನಾಗರಾಜು ಹಾಗೂ ಕೇಂದ್ರ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾದ ಶ್ರೀ ಬಿ.ಎಂ.ಪಟೇಲ್ ಪಾಂಡು , ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪರಿಷತ್ತಿನ ಪದಾಧಿಕಾರಿಗಳು ವೇದಿಕೆ ಗಣ್ಯರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದ ಅಭಿಮಾನಿ ಜನತೆ ಕಾರ್ಯಕ್ರಮಕ್ಕೆ ಸಾಕ್ಷೀಯಾದರು.