ಚಿಕ್ಕಬಳ್ಳಾಪುರ: ಪಕ್ಷಕ್ಕೆ ನಿಷ್ಠರಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿವಿಧ ಯೋಜನೆಗಳನ್ನು ಮನೆ ಬಾಗಿಲುಗಳಿಗೆ ತಲುಪಿಸುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಾಲ್ಲೂಕು ಕಾಂಗ್ರೆಸ್ ಮುಖಂಡ ಹಾಗೂ ಮಂಡಿಕಲ್ ಗ್ರಾಮದ ಶ್ರೀ ಯೋಗಿ ನಾರಾಯಣ ಯತೀಂದ್ರ ಟ್ರಸ್ಟ್ ಗೌರವಾಧ್ಯಕ್ಷ ಎಂ.ಪಿ. ಕುಪೇಂದ್ರ ಹೇಳಿದರು.
ಅವರು ತಾಲ್ಲೂಕಿನ ಮಂಡಿಕಲ್ ಪಂ ಚಾಯಿತಿ ವ್ಯಾಪ್ತಿಯ ಮಂಡಿಕಲ್ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ತಾಲ್ಲೂಕು ಕಾಂಗ್ರೆಸ್ ಮುಖಂಡ ಹಾಗೂ ಮಂಡಿಕಲ್ ಗ್ರಾಮದ ಶ್ರೀ ಯೋಗಿ ನಾರಾಯಣ ಯತೀಂದ್ರ ಟ್ರಸ್ಟ್ ಗೌರವಾಧ್ಯಕ್ಷ ಎಂ.ಪಿ. ಕುಪೇಂದ್ರ ರವರ ನೇತೃತ್ವದಲ್ಲಿ ಇತ್ತೀಚಿಗೆ ಮಂಡಿಕಲ್ ಮತ್ತು ಮಂಚೆನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಆದ ನಾಗಭೂಷಣ್ ಹಾಗೂ ಪಿ.ಎಲ್.ಡಿ. ಬ್ಯಾಂಕ್ ಗೆ ಸರ್ಕಾರಿ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಮಂಚನಬೆಲೆ ವೆಂಕಟನಾರಾಯಣಪ್ಪ, ಮಂಚನಬೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧು ನಂದಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ನಳಿನ ರಮೇಶ್ ಮತ್ತು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಚಿಕ್ಕಬಳ್ಳಾಪುರ ನಗರಸಭೆಗೆ ನಾಮ ನಿರ್ದೇಶಿತ ಐವರು ಸದಸ್ಯರಿಗೆ ಗೌರವ ಸನ್ಮಾನ ನಡೆಸಲಾಯಿತು. ಕಾರ್ಯಕ್ರಮದ ಮೊದಲು ಗುಂಡ್ಲು ಮಂಡಿಕಲ್ ಗ್ರಾಮದ ಶ್ರೀ ವೀರಾಂಜನೇಯ ಸ್ವಾಮಿ ಸನ್ನಿಧಿಗೆ ತೆರಳಿ ಕ್ಷೇತ್ರದ ಜನತೆಗೆ ಒಳಿತಾಗವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಪೂಜಾ ಕಾರ್ಯಕ್ರಮದ ನಂತರ ಗುಂಡ್ಲುಮಂಡಿಕಲ್ ಗ್ರಾಮದಿಂದ ನೂರಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಸ್ಥಳೀಯ ಮತ್ತು ತಾಲೂಕು ಮಟ್ಟದ ನಾಯಕರಗಳ ಹಾಜರಿಯೊಂದಿಗೆ ಕಾರ್ಯಕ್ರಮ ಅರ್ಥಪೂರ್ಣವಾಯಿತು. ಪಕ್ಷಕ್ಕೆ ದುಡಿದು ಸ್ಥಾನವನ್ನು ಅಲಂಕರಿಸಿರುವ ವಿಜೇತರನ್ನು ಸನ್ಮಾನಿಸಿ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವಂತೆ ಮುಖಂಡರು ಕಾರ್ಯಕರ್ತರಿಗೆ ಕರೆ ನೀಡಿದರು.