ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್, ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನು ಒಂದು ಲಿಂಗಾಯತ ವಿರೋಧಿ ಪಕ್ಷ ಅಂತ ಸೃಷ್ಟಿ ಮಾಡಲು ಹೊರಟಿದ್ದಾರೆ, ಅದನ್ನವರು ಯಾಕೆ ಮಾಡುತ್ತಿದ್ದಾರೆ ಅಂತ ಚೆನ್ನಾಗಿ ಗೊತ್ತಿದೆ, ಆದರೆ ಕಾಂಗ್ರೆಸ್ ಎಲ್ಲ ಧರ್ಮ ಮತ್ತು ಜಾತಿಯವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪಕ್ಷ, ನಮ್ಮ ಪಕ್ಷದಲ್ಲಿ ಲಿಂಗಾಯತ ಶಾಸಕ ಮತ್ತು ಮಂತ್ರಿಗಳಿಲ್ಲವೇ? ಒಕ್ಕಲಿಗ, ದಲಿತ ಶಾಸಕರೂ ಇದ್ದಾರೆ, ಎಲ್ಲ ಜಾತಿ-ಧರ್ಮಗಳನ್ನು ಸಮಾನವಾಗಿ ನೋಡುವ ಪಕ್ಷ ತಮ್ಮದು ಎಂದು ಹೇಳಿದರು.