ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲ್ಯಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಲು ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ, ಮಾಜಿ ಶಾಸಕ ರಾಜಣ್ಣ, ಶಿಡ್ಲಘಟ್ಟ ಮುಖಂಡರಾದ ಸೀಕಲ್ ಆನಂದ್ ಗೌಡ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆಂಜನೇಯಗೌಡ ಉಪಸ್ಥಿತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಶಿಡ್ಲಘಟ್ಟ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಸೀಕಲ್ ಆನಂದ್ ಗೌಡ ಮಾತನಾಡಿ ಚುನಾವಣೆಗೆ ಮೊದಲು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಮಂಕು ಬೂದಿ ಹಚ್ಚಿ ಸಮಯ ವ್ಯರ್ಥ ಮಾಡುತ್ತಿದೆ ಸರ್ಕಾರ ಐದು ಗ್ಯಾರಂಟಿಗಳಿಗೆ ಬಹಳಷ್ಟು ಹಣ ಪೂಲು ಮಾಡುತ್ತಿದ್ದು ಇದರಿಂದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅನುದಾನ ಸ್ಥಗಿತಗೊಂಡಿದೆ ಹಿಂದುಳಿದ ವರ್ಗಗಳಿಗೆ ನೆಪ ಮಾತ್ರಕ್ಕೆ ಬಜೆಟನಲ್ಲಿ ಘೋಷಿಸುವ ಮೊತ್ತಕ್ಕೆ, ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೆ ವಾತ್ಯಾಸವಿದೆ,
ತಮ್ಮ ರಾಜಕೀಯ ಲಾಭಕ್ಕಾಗಿ ಅಹಿಂದ ಮಂತ್ರ ಪಠಿಸಿ ಹಿಂದುಳಿದ ಸಮುದಾಯಗಳನ್ನು ಬಳಸಿಕೊಳ್ಳುವ ಸಿ ಎಂ ಸಿದ್ದರಾಮಯ್ಯ ನವರು ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ಕೆ ಕಲ್ಲು ಹಾಕಿದ್ದಾರೆ ಎಂದರು.ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಬದ್ದತೆಯಿಂದ ಕೆಲಸ ಮಾಡಲು ಸರ್ಕಾರಕ್ಕೆ ಆಗ್ತಿಲ್ಲ ಕೇವಲ ಹಗರಣಗಳ ಮುಖಾಂತರ ದುಡ್ಡು ಮಾಡುವುದೂಂದೆ ಸರ್ಕಾರಕ್ಕೆ ಗೂತ್ತಿದೆ ಅಭಿವೃದ್ಧಿ ಕಾರ್ಯಗಳಿಗೆ ಸರಿಯಾದ ರೀತಿಯಲ್ಲಿ ಅನುದಾನ ನೀಡದ ಕಾರಣ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತ ಗೊಂಡಿದೆ ಇದಲ್ಲದೆ ಈ ಸರ್ಕಾರದಲ್ಲಿ ಭ್ರಷ್ಟಾಚಾರ ಸಾಮಾನ್ಯವಾಗಿಬಿಟ್ಟಿದ್ದು ಇವರ ದುರಾಡಳಿತ ಹಾಗೂ ಮುಡಾ ಹಗರಣ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿದೆ ಇನ್ನು ಇವರ ದುರಾಡಳಿತದಿಂದ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ ಸರ್ಕಾರದ ಜನವಿರೋಧಿ ನೀತಿಯನ್ನು ಪ್ರತಿಯೊಬ್ಬರಿಗೂ ಅರಿವಾಗಲಿ ಎಂದು ಬಿಜೆಪಿ ನಿರಂತರವಾಗಿ ಹೋರಾಟದ ಮುಖಾಂತರ ಜನರಿಗೆ ಜಾಗೃತಿ ಮೂಡಿಸುತ್ತಿದೆ ಎಂದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆಂಜನೇಯಗೌಡ ಮಾತನಾಡಿ ಹಿಂದುಳಿದ ವರ್ಗಗಳ ಬಗ್ಗೆ ಸರ್ಕಾರದ ಮಲತಾಯಿ ಧೋರಣೆ ಖಂಡನೀಯ ಬಜೆಟ್ನಲ್ಲಿ ಘೋಷಿಸುವ ಮೊತ್ತಕ್ಕೆ, ವಾಸ್ತವವಾಗಿ ಬಿಡುಗಡೆ ಮಾಡಿರುವ ಮೊತ್ತಕ್ಕೆ ವಾತ್ಯಾಸಗಳಿವೆ ಇದರಿಂದಾಗಿ ಹಿಂದುಳಿದ ಹಾಗೂ ಅತೀ ಹಿಂದುಳಿದ ಹಾಗೂ ಅಲೆಮಾರಿ ಸಮುದಾಯ ಹಾಗೂ ಇತರೆ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳು ಈ ಹಿಂದಿನ ಸರ್ಕಾರದಲ್ಲಿ ಪಡೆಯುತ್ತಿದ್ದ ಸ್ವಉದ್ಯೋಗ ಯೋಜನೆ,
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುತ್ತಿದ್ದ ಉಚಿತ್ ಬೋರವೆಲ್ ಯೋಜನೆ ಬಹುತೇಕ ಸ್ಥಗಿತಗೊಂಡಿದೆ, ತಮ್ಮಪಂಚ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಕಲ್ಯಾ ಣ ಕಾರ್ಯಕ್ಕೆ ವಿನಿಯೋಗ ವಾಗಬೇಕಿದ್ದ ಹಣವೆಲ್ಲವು ಪಂಚಯೋಜನೆಗಳಿಗೆ ವರ್ಗಾವಣೆಯಾಗುತ್ತಿದೆ ಎಂದರು.ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮೋರ್ಚಾದ ಪ್ರಧಾನಕಾರ್ಯದರ್ಶಿ ಲಕ್ಷ್ಮೀಪತಿ, ಕಾರ್ಯಕಾರಿಣಿ ಸದಸ್ಯ ಆಂಜಿನಪ್ಪ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್, ಪ್ರತಾಪ್, ಸುರೇಂದ್ರ ಗೌಡ, ಜಿಲ್ಲಾ ಮಾಧ್ಯಮ ಸಂಚಾಲಕ ವಿ ಮಧುಚಂದ್ರ, ಗೌರಿಬಿದನೂರು ತಾಲೂಕು ಪ್ರಧಾನ ಕಾರ್ಯದರ್ಶಿ ವೇಣು, ಶಿವಕುಮಾರ್, ವಾಸು, ನಾಗೇಶ್ ಇತರರು ಹಾಜರಿದ್ದರು.