ಚಿಕ್ಕಬಳ್ಳಾಪುರ: ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದರಿಂದ ಬೇರೆರಾಜ್ಯಗಳಿಂದ ವಿದ್ಯುತ್ ಖರೀದಿಸಿ ವಿದ್ಯುತ್ಪೂರೈಕೆ ಮಾಡುವಂತಹ ಪರಿಸ್ಥಿತಿ ಉಂಟಾಗಿತ್ತು, ಅಲ್ಲದೆ ಉತ್ತರಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ವಿದ್ಯುತ್ ಶಕ್ತಿಯನ್ನು ಬೇಸಿಗೆಯಲ್ಲಿ ಸಾಲವಾಗಿ ಪಡೆದು ಮರು ದಿನಗಳಲ್ಲಿ ವಾಪಸ್ಸು ಮಾಡುವ ಒಪ್ಪಂದದ ಮೇರೆಗೆ ವಿದ್ಯುತ್ ಪಡೆಯಲಾಗಿತ್ತು.
ಅಂತಹ ಸಂಕಷ್ಠದಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸಿ ರೈತರಿಗೆ, ನಾಗರಿಕರಿಗೆ, ಕೈಗಾರಿಕೆಗಳಿಗೆವಿದ್ಯುತ್ ಪೂರೈಸುವ ಕಾರ್ಯವನ್ನು ಮಾಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿ ಬೇರೆ ರಾಜ್ಯಗಳಿಗೆ ಪೂರೈಸುವ ಸ್ಥಿತಿಗೆ ತಲುಪಿದ್ದೇವೆ ಎಂದು ಇಂದನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಅವರು ಚಿಕ್ಕಬಳ್ಳಾಫುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದರಿಂದ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ವಿದ್ಯುತ್ ಪೂರೈಕೆ ಮಾಡುವಂತಹ ಪರಿಸ್ಥಿತಿ ಉಂಟಾಗಿತ್ತು, ಅಲ್ಲದೆ ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ವಿದ್ಯುತ್ ಶಕ್ತಿಯನ್ನು ಬೇಸಿಗೆಯಲ್ಲಿ ಸಾಲವಾಗಿ ಪಡೆದು ಮರು ದಿನಗಳಲ್ಲಿ ವಾಪಸ್ಸು ಮಾಡುವ ಒಪ್ಪಂದದ ಮೇರೆಗೆ ವಿದ್ಯುತ್ ಪಡೆಯಲಾಗಿತ್ತು.
ವಿದ್ಯುತ್ ಉಳಿತಾಯ ಮಾಡಿ ಸೇಲ್ ಮಾಡುವ ಸ್ತಿತಿಗೆ ತಲುಪಿದ್ದೇವೆ ನಮ್ಮ ಸರ್ಕಾರ ಕುಸುಮ ಸೌರ ವಿದ್ಯುತ್ ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಿ ಸಹಾಯಧನವನ್ನು ಹೆಚ್ಚಿಸಿದೆ. ಈ ಯೋಜನೆಯು ಅನುಷ್ಠಾನಗೊಂಡಲ್ಲಿ ರೈತರ ವಿದ್ಯುತ್ ಬೇಡಿಕೆಯ ಎಲ್ಲ ಸಮಸ್ಯೆಗಳು ಪರಿಹಾರವಾಗಲಿದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 871 ಎಕರೆ ಜಾಗವನ್ನು ಗುರ್ತಿಸಿ ನೀಡುವಂತೆ ತಿಳಿಸಲಾಗಿದೆ. ಈ ಪೈಕಿ ಈಗಾಗಲೇ 240 ಎಕರೆ ಜಾಗವನ್ನು ನೀಡಲಾಗಿದೆ. ಈಜಾಗದಲ್ಲಿ ಮೊದಲನೆ ಹಂತದಲ್ಲಿ 18 ಉಪ ಕೇಂದ್ರಗಳಿಂದ 137 ಮೆಗಾವ್ಯಾಟ್ ಹಾಗೂ 2ನೇ ಹಂತದಲ್ಲಿ 6 ಉಪಕೇಂದ್ರಗಳಿಂದ 37 ಮೆಗಾವ್ಯಾಟ್ ವಿದ್ಯುತ್ನ್ನು ಇಲ್ಲಿಯೇ ಉತ್ಪಾದಿಸಿ ಜಿಲ್ಲೆಯಲ್ಲಿ ಒಟ್ಟು 174 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು. ಈ ರೀತಿ ಉತ್ಪಾದನೆಯಾದ ವಿದ್ಯುತ್ ನ್ನು ವಿದ್ಯುತ್ ಉಪ ಕೇಂದ್ರದಿಂದ 500 ಮೀಟರ್ ಅಂತದ ಸ್ಥಳೀಯ ರೈತರಿಗೆ, ಸರ್ಕಾರಿ ಶಾಲೆ, ಅಂಗನವಾಡಿಗಳು ಹಾಗೂ ಇತರ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಅನ್ನು ಪೂರೈಸಲಾಗುವುದು.
ಇನ್ನು ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಕ್ಕೆ ಆಗಮಿಸಿದ್ದ ಇಂದಿನ ಸಚಿವರಿಗೆ ರೈತ ಸಂಘಟನೆಗಳು ರೈತರಿಗೆ ಹಾಕುವ ಟಿಸಿಗಳಿಗೆ ಅಧಿಕ ಹಣ ವಸೂಲಿ ಮಾಡುತ್ತಿರುವುದನ್ನ ನಿಲ್ಲಿಸಬೇಕೆಂದು ಮನವಿ ಸಲ್ಲಿಸಿದರೆ ವಿದ್ಯುತ್ ಗುತ್ತಿಗೆ ನೌಕರರು ಇಲಾಖೆ ನಮಗೆ ನೀಡಬೇಕಿರುವ ಬಿಲ್ ಬಾಕಿಯನ್ನು ಪಾವತಿಸುವಂತೆ ಆದೇಶ ಮಾಡಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಗೌರಿಬಿದನೂರು ಶಾಸಕ ಕೆ.ಹೆಚ್ ಪುಟ್ಟಸ್ವಾಮಿ ಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬಿಳಗಿ, ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.