ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಊಹಾಪೋಹಗಳು ಎದ್ದಿವೆ ಆದರೆ ಅಧಿಕೃತವಾಗಿ ಮಾಹಿತಿ ಲಭ್ಯವಾಗಿಲ್ಲ.ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿದ್ದಾರೆ.
ಕೆಲವರು ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ.ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ನಂತರ, ಗಂಗಾದಲ್ಲಿ ಅಮೃತ ಸ್ನಾನ ಅಥವಾ ಸಾಮೂಹಿಕ ಪವಿತ್ರ ಸ್ನಾನದಲ್ಲಿ ವಿಳಂಬವಾಯಿತು. ಮೌನಿ ಅಮವಾಸ್ಯೆಯಂದು ಅಮೃತ ಸ್ನಾನವು ಮಹಾ ಕುಂಭದ ಅತ್ಯಂತ ಮಹತ್ವದ ಆಚರಣೆಯಾಗಿದೆ. 25ಕ್ಕೂ ಹೆಚ್ಚು ಆಂಬ್ಯುಲೆನ್ಸ್ ವಾಹನಗಳು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿವೆ. 10 ಕೋಟಿಗೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇತ್ತು.
ಈಗಾಗಲೇ ಪ್ರಯಾಗ್ರಾಜ್ನಲ್ಲಿ 8ರಿಂದ 10 ಕೋಟಿ ಮಂದಿ ಇದ್ದಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.ಘಟನೆ ಸಂಭವಿಸಿದ ಕೂಡಲೇ ತುರ್ತಾಗಿ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಭಕ್ತರಿಗೆ ಯಾವುದೇ ರೀತಿಯ ಆತಂಕಕ್ಕೊಳಗಾಗದೆ ಸೂಚನೆ ನೀಡಿವದಂತಿಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಪ್ರಧಾನಮಂತ್ರಿನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಚಿವ ನಡ್ಡಾ ಅವರು ಆದಿತ್ಯನಾಥ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಮುಂಜಾಗ್ರತಾ ಕ್ರಮವನ್ನು ವಹಿಸುವಂತೆ ಸೂಚನೆ ಸಲಹೆ ನೀಡಿದ್ದಾರೆ.ಮಕ್ಕಳು ಮಹಿಳೆಯರು ನದಿಯಲ್ಲಿ ಜಾಸ್ತಿ ದೂರ ತೆರಳದಂತೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಸದ್ಯಕ್ಕೆ ಪ್ರಯಾಗ್ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ.ಘಟನೆಯಿಂದ ಜಾಗೃತವಾಗಿರುವ ಕೇಂದ್ರ ಸರ್ಕಾರ ಪ್ರಯಾಗ್ರಾಜ್ಗೆ ವಿವಿಧ ರಾಜ್ಯಗಳಿಂದ ತೆರಳುವ ರೈಲು ಬಸ್ಗಳ ಹಾಗೂ ವಿಮಾನ ಪ್ರಯಾಣವನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ ಎಂದು ಹೇಳಲಾಗಿದೆ.