ಗೋಕರ್ಣ: ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ವಿದೇಶಿ ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ಮಂಗಳವಾರ ನಡೆದಿದೆ.
ರಷ್ಯಾದ ಇರೀನಾ (37) ಮತ್ತು ಅನ್ಯ (27) ರಕ್ಷಣೆಗೊಳಗಾದವರಾಗಿದ್ದಾರೆ. ಒಟ್ಟು ಮೂವರು ಸಮುದ್ರದ ನೀರಿನಲ್ಲಿ ಈಜಾಡಲು ತೆರಳಿದ್ದು, ಇರೀನಾ ಮತ್ತು ಅನ್ಯ ಸಮುದ್ರದಲ್ಲಿ ಮುಳುಗುತ್ತಿದ್ದನ್ನು ಕಂಡ ಕೂಡಲೇ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಮತ್ತು ಜೀವ ರಕ್ಷಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರಿಬ್ಬರನ್ನೂ ರಕ್ಷಿಸಿದ್ದಾರೆ.
ಇಬ್ಬರು ವಿದೇಶಿ ಮಹಿಳೆಯರು ಸಮುದ್ರದ ಅಲೆಯ ಸುಳಿಗೆ ಸಿಲುಕಿ ಮುಳಗುವ ಹಂತದಲ್ಲಿದ್ದಾಗ ಬೋಟ್ ಮೂಲಕ ಸ್ಥಳಕ್ಕೆ ಧಾವಿಸಿದ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಮತ್ತು ಜೀವ ರಕ್ಷಕ ಸಿಬ್ಬಂದಿ ಪ್ರವಾಸಿಗರನ್ನು ರಕ್ಷಿಸಿ ದಡಕ್ಕೆ ತಂದಿದ್ದಾರೆ.