ಬೆಂಗಳೂರು: ಕುವೆಂಪು ಅವರ 120 ಜನ್ಮ ದಿನಾಚರಣೆಯ ಅಂಗವಾಗಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಸಂಘರ್ಷ ಸಮಿತಿ ವತಿಯಿಂದ ಬೆಂಗಳೂರಿನ ಲಾಲ್ ಬಾಗ್ ಮುಖ್ಯದ್ವಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾಕ್ಟರ್ ನಲ್ಲೂರ್ ಪ್ರಸಾದ್ ಅವರು ಮಾಲಾರ್ಪಣೆ ಮಾಡಿದ ಸಂದರ್ಭದಲ್ಲಿ ಮಾತಾಡಿ ಕುವೆಂಪುರವರ ಅತ್ಯಮೂಲ್ಯವಾದ ಹಾಗೂ ಅನನ್ಯತೆಯ ವಿಶ್ವಮಾನವ ಸಂದೇಶ ಇನ್ನೂ ಕಾರ್ಯರೂಪಕ್ಕೆ ಬಾರದೇ ಇರುವುದು ವಿಷಾದಕರ ಸಂಗತಿಯಾಗಿದೆ ಎಂದರು.
ಕನ್ನಡ ಸಂಘರ್ಷ ಸಮಿತಿಯ ಸಂಸ್ಥಾಪಕ ಹಾಗೂ ಪತ್ರಕರ್ತರಾದ ರಾಮಣ್ಣ ಕೋಡಿ ಹೊಸಳ್ಳಿಯವರು ಕುವೆಂಪುರವರ ವಿಚಾರಗಳನ್ನು ನಾವು ಜೀವನದಲ್ಲಿ ಅನುಸರಿಸಿ ಅನವರತ ಜೀವಂತವಾಗಿರಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಉಮೇಶ್ ಮತ್ತು ಡಾ. ಶ್ರೀಲತಾ ಕುವೆಂಪು ರಚನೆಯ ಗೀತೆಗಳನ್ನು ಹಾಡಿದರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಕಾಶ್ ಮೂರ್ತಿ ವಂದನಾರ್ಪಣೆಗೈದರು ತಾ.ಸಿ ತಿಮ್ಮಯ್ಯ ಮತ್ತು ರಾಮೇಗೌಡ, ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ನಾಗರಾಜ ಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.