ತುಮಕೂರು: ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿನಿಯೋರ್ವರು ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಮಾವಿನಹಳ್ಳಿಯಲ್ಲಿ ನಡೆದಿದೆ. ಕೀರ್ತನಾ(19) ಎಂಬ ವಿದ್ಯಾರ್ಥಿನಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪಿದ್ದಾರೆ.
ಮೃತಳು ದಾವಣಗೆರೆ ಶಾಮನೂರು ಶಿವಶಂಕರಪ್ಪ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಆಕೆ ಮೃತಳಾದ ನಂತರ ಆಕೆಯ ಕಣ್ಣುಗಳನ್ನು ದಾನ ಮಾಡಲಾಗಿದೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.