ಬೆಂಗಳೂರು: ಕಾರು ಡಿವೈಡರ್ಗೆ ಗುದ್ದಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದು ಮಹಿಳೆ ಸೇರಿ ಮೂವರು ಸಾವನ್ನಪ್ಪಿರುವ ದುರ್ಘಟನೆ ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಬಳಿಯ ಎಕ್ಸ್ಪ್ರೆಸ್ ವೇಯಲ್ಲಿ ನಡೆದಿದೆ.
ಶಿವಾಜಿನಗರದದ ಲಿಯಾಕತ್ (50), ಅಸ್ಮಾ (38), ನೂರ್ (40) ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ.ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ.
ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ರಾಮನಗರ ಸಂಚಾರ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆದು ರಾಮನಗರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಡೆಲ್ಲಿ ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ಹ್ಯೂಂಡಯ್ ಐ ಟೆನ್ ಕಾರಿನಲ್ಲಿ ಮೈಸೂರಿಗೆ ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ನಿನ್ನೆ ರಾತ್ರಿ 9.30ರ ವೇಳೆ ತೆರಳುತ್ತಿದ್ದಾಗ ಡಿವೈಡರ್ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಷ್ಟೇ ಮುತುವರ್ಜಿ ವಹಿಸಿದರೂ ಅಪಘಾತಗಳು ನಿಲ್ಲುತ್ತಿಲ್ಲ.
ರಾಜ್ಯದ ಪೊಲೀಸ್ ಇಲಾಖೆಯೇ ಜೀವ ಉಳಿಸುವಂತಹ ನಿಟ್ಟಿನಲ್ಲಿ ಸ್ಪೀಡ್ ಡಿಟೆಕ್ಟರ್ಗಳನ್ನು ಅಳವಿಡಿಸಿ ಗಂಟೆಗೆ 100 ಕಿಲೋಮೀಟರ್ಗಿಂತ ಹೆಚ್ಚು ವೇಗವಾಗಿ ಹೋದರೆ ದಂಡ ವಿಧಿಸುವಂತೆ ಮಾಡಿದ್ದಾರೆ.ಆದರೆ ಈ ಅಪಘಾತದ ಸಂದರ್ಭದಲ್ಲಿ ಕಾರಿನ ವೇಗದ ಮಿತಿ ಗಂಟೆಗೆ 70 ಕಿಲೋಮೀಟರ್ ಕೂಡ ದಾಟಿರಲಿಲ್ಲ ಎನ್ನಲಾಗಿದೆ.ಹೀಗಾಗಿ ಅಪಘಾತಕ್ಕೆ ನಿಖರ ಕಾರಣವೇನೆಂಬುದರ ಬಗ್ಗೆ ರಾಮನಗರ ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.