ಬೆಂಗಳೂರು: ಡೆತ್ನೋಟ್ ಕೈಯಲ್ಲಿ ಹಿಡಿದುಕೊಂಡೇ ಕೆಎಸ್ಡಿಎಲ್ ಅಧಿಕಾರಿ ನೇಣಿಗೆ ಶರಣಾಗಿರುವಂತಹ ಘಟನೆ ಡಿಸೆಂಬರ್ 28ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ಬ್ಲಾಕ್ನಲ್ಲಿರುವ ಮನೆಯಲ್ಲಿ ಅಮೃತ್ ಶಿರೂರ್(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ.
ಶಿವಮೊಗ್ಗದ ಶಿರಾಳಕೊಪ್ಪ ನಿವಾಸಿಯಾಗಿರುವ ಅಮೃತ್ ಶಿರೂರ್, ಕೆಎಸ್ಡಿಎಲ್ನಲ್ಲಿ ಮೆಟೀರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. 2019ರಲ್ಲಿ ಎರಡನೇ ಮದುವೆಯಾಗಿದ್ದರು. ಕೌಟುಂಬಿಕ ವಿಚಾರದಲ್ಲಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಕೈಯಲ್ಲಿ ಡೆತ್ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿರುವ ಅಮೃತ್, ತಂದೆ-ತಾಯಿಗೆ ಒಳ್ಳೆಯ ಮಗನಾಗಲಿಲ್ಲ, ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ. ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಡೆತ್ನೋಟ್ ವಶಕ್ಕೆ ಪಡೆದು ಎಫ್ಎಸ್ಎಲ್ಗೆ ಪೊಲೀಸರು ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಿದ್ದಾರೆ.