ಬೆಂಗಳೂರು: ಮಹಿಳಾ ಸಬಲೀಕರಣಕ್ಕೆ ನೆರವಾಗಲು ಮತ್ತು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೆನರಾ ಬ್ಯಾಂಕ್ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ,ಕೆನರಾ ಉತ್ಸವ ಒಂದು ವಿನೂತನ ಯೋಜನೆಯಾಗಿದ್ದು ಇದರಲ್ಲಿ ಮಹಿಳಾ ಉದ್ಯಮಿಗಳಿಂದ ತಯಾರಿಸಲ್ಪಟ್ಟ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆಯನ್ನು ಕಲ್ಪಿಸುತ್ತದೆ ಎಂದು ಕೆನರಾ ಬ್ಯಾಂಕ್ ಮುಖ್ಯ ಮಹಾಪ್ರಬಂಧಕ ಕೆ.ಜೆ.ಶ್ರೀಕಾಂತ್ ತಿಳಿಸಿದರು.
ಅವಾನಿ ಶಂಕರಮಠದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಕೆನರಾ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಯಾವುದೇ ಉದ್ಯಮ ಸ್ಥಾಪಿಸಲು ಮತ್ತು ಬೆಳೆಸಲು ಕೆನರಾ ಬ್ಯಾಂಕ್ ಸಂಪರ್ಕಿಸಬಹುದು ಎಂದು ಹೇಳಿದರು. ಕೆನರಾ ಬ್ಯಾಂಕ್ ನ ಮಹಾ ಪ್ರಬಂಧಕರಾದ ಭಾಸ್ಕರ್ ಚಕ್ರವರ್ತಿ ಮಾತನಾಡಿ, ಸರ್ಕಾರ ಹಮ್ಮಿಕೊಂಡಿರುವ ಹಲವು ಮಹಿಳಾ ಪರ ಯೋಜನೆಗಳ ಬಗ್ಗೆ ವಿವರಿಸಿದರು. ಕೆನರಾ ಉತ್ಸವ ವಿವಿಧ ಬಗ್ಗೆಯ ಉತ್ಪನ್ನಗಳ ಐವತ್ತು ಮಹಿಳಾ ಉದ್ಯಮಿಗಳು ಭಾಗವಹಿಸಿದ್ದರು. ಕೆನರಾ ಬ್ಯಾಂಕ್ ನ ಹಿರಿಯ ಅಧಿಕಾರಿಗಳಾದ ಪಾರ್ಶ್ವನಾಥ, ಉತ್ತಮ್ ಪಾಠಕ್, ಶ್ರೀದರ್ ಸಗಬಾಲ, ರವಿಸಿಂಗ್, ಸಂಗೀತಾ ಉಪಸ್ಥಿತರಿದ್ದರು.