ಬೆಂಗಳೂರು: ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಿದ ಮಾತುಗಳಲ್ಲಿ ವೈರಾಗ್ಯದ ಛಾಯೆ ಕಂಡಿತು ಎಂದರೆ ಉತ್ಪ್ರೇಕ್ಷೆ ಅನಿಸದು. ಅಧಿಕಾರ ಹಂಚಿಕೆ ವಿಷಯದಲ್ಲಿ ಬಿಸಿ ಬಿಸಿ ಚರ್ಚೆಗಳಾಗುತ್ತಿರುವ ಸಮಯದಲ್ಲೇ ಸಿದ್ದರಾಮಯ್ಯ ತ್ಯಾಗ ಬಲಿದಾನಗಳ ಬಗ್ಗೆ ಮಾತಾಡಿದ್ದು ಕನ್ನಡಿಗರಲ್ಲಿ ಆಶ್ಚರ್ಯ ಹುಟ್ಟಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧಿ ನೇತೃತ್ವದಲ್ಲಿ ಅನೇಕ ಕಾಂಗ್ರೆಸ್ಸಿಗರು ತ್ಯಾಗ ಬಲಿದಾನಗಳನ್ನು ಮಾಡಿದರು, ನಮ್ಮಲ್ಲೂ ಕೂಡ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಲಿದಾನಗಳನ್ನು ಮಾಡಿದ್ದಾರೆ, ಹಾಗಾಗಿ ನಾವು ಅದೇ ದಾರಿಯಲ್ಲಿ ಮುನ್ನಡೆದು ತ್ಯಾಗ ಬಲಿದಾನ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.