ರಾಮನಗರ: ಕೆಲವೇ ದಿನಗಳಲ್ಲಿ ಬ್ರೋಕರ್ಗಳು ನಿಮ್ಮ ಮನೆಗೆ ಬರುತ್ತಾರೆ. ಯಾವುದೇ ಕಾರಣಕ್ಕೂ ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಹಿಂದೆ ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲೂ ಸಹ ಇದೇ ಮಾತು ಹೇಳಿದ್ದ ಡಿಕೆ ಶಿವಕುಮಾರ್ ಇದೀಗ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಜಿಲ್ಲೆಯ ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತ್ತೆ ಮತ್ತೆ ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ. ನಿಮ್ಮ ಆಸ್ತಿಗೆ ಬಹಳ ಮೌಲ್ಯ ಬರಲಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಆಸ್ತಿ ಮಾರಿಕೊಳ್ಳಬೇಡಿ, ಉಳಿಸಿಕೊಳ್ಳಿ ಎಂದು ಹೇಳಿದ್ದಾರೆ.