ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಕೇಂದ್ರಕ್ಕೆ ರಾಜ್ಯದಿಂದ ತೆರಿಗೆ ರೂಪದಲ್ಲಿ 4ಲಕ್ಷ ಕೋಟಿ ರೂಪಾಯಿ ಪಾವತಿಸುತ್ತೇವೆ.
ಆದರೆ ಕೇಂದ್ರದಿಂದ 68 ಕೋ. ರೂ.ಮಾತ್ರ ದೊರೆಯುತ್ತಿದೆ. ಕಳೆದ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಿಸಿದರೂ ಈವರೆಗೂ ಒಂದು ಬಿಡುಗಾಸು ನೀಡಿಲ್ಲ. ಹಾಗಾಗಿ ಕೇಂದ್ರದಿಂದ ಈ ಬಾರಿ ಬಜೆಟ್ನಲ್ಲಿ ಏನನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳವರು ತಮ್ಮ ವಿರುದ್ಧ ಇಲ್ಲ ಸಲ್ಲದ ಪಿತೂರಿ ನಡೆಸುತ್ತಿದ್ದಾರೆ. ಇ.ಡಿಯವರು ಮಾಡಿರುವುದು ಕೇವಲ ಜಪ್ತಿಯಷ್ಟೇ. ಅದನ್ನೆ ತಿರುಚಿ ಬೇರೆ ರೂಪದಲ್ಲಿ ಹೇಳಲಾಗುತ್ತಿದೆ ಎಂದು ತಮ್ಮ ವಿರುದ್ಧ ವ್ಯವಸ್ಥಿತ ಷಡ್ಯಂತರಮಾಡಲಾಗುತ್ತದೆ ಎಂದು ಅಸಮಾಧಾನ ಹೊರ ಹಾಕಿದರು.