ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಂಡಿಸಿರುವ ಕೇಂದ್ರ ಬಜೆಟ್ನಲ್ಲಿ ನಮ್ಮ ಕರ್ನಾಟಕ ರಾಜ್ಯಕ್ಕೆ ಏನು ಕೊಟ್ಟಿಲ್ಲ ಎಂದು ಕೆಪಿಸಿಸಿ ರಾಜ್ಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಕೋನಪಲ್ಲಿ ಕೊದಂಡ ತಿಳಿಸಿದರು.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಜೆಟ್ನಲ್ಲಿ ರೈತರು, ಬಡವರು, ಕೂಲಿ ಕಾರ್ಮಿಕರಿಗೆ ಯಾವುದೇ ರೀತಿಯ ಅನುಕೂಲವಿಲ್ಲ. ಹೊಸ ಯೋಜನೆಗಳನ್ನು ಜಾರಿ ಮಾಡಿಲ್ಲ. ಇದರಿಂದ ಮತ್ತೊಮ್ಮೆ ಮೋದಿ ಅವರು ಕೇವಲ ಉದ್ಯಮಿಗಳು ಮತ್ತು ಶ್ರೀಮಂತರ ಪರ ಎಂಬುದು ಸಾಬೀತಾಗಿದೆ. ವಿಶೇಷವಾಗಿ ವರ್ಷಕ್ಕೆ ಎರಡು ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಭರವಸೆ ಮತ್ತೊಮ್ಮೆ ಹುಸಿಯಾಗಿದೆ. ರಾಜ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಜನಪರ ಯೋಜನೆ ಜಾರಿಗೊಳಿಸಿಲ್ಲ.
ಕರ್ನಾಟಕದ ಮೇಲೆ ಎಷ್ಟೊಂದು ದ್ವೇಷ ಇದೆ ಎಂಬುದುಸಾಬೀತಾಗಿದೆ. ಹಾಗೆಯೇ ಕೋಲಾರ/ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯಾವುದೇ ಅಭಿವೃದ್ಧಿಗೆ ವಿಶೇಷ ಅನುದಾನ ಕೊಟ್ಟಿಲ್ಲ ಮತ್ತು ಯಾವುದೇ ತರಹ ಬಡವರಿಗೆ, ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಅನುದಾನ ನೀಡಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.