ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ವಿರೋಧಿಸಿ ಇಂದು ವಿಪಕ್ಷಗಳು ಪ್ರತಿಭಟನಾ ಧರಣಿ ನಡೆಸಿವೆ.ಇಂದು ಸಂಸತ್ ಭವನದ ಎದುರು ಇಂಡಿಯಾ ಕೂಟದ ಸದಸ್ಯರು ಪ್ರತಿಭಟನಾ ಧರಣಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ಜನ ಹಾಗೂ ರೈತರ ವಿರೋಧಿಯಾಗಿದೆ ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.ವಿಪಕ್ಷಗಳು ತಾರತಮ್ಯದ ಬಜೆಟ್ ಎಂದು ಹೇಳಿವೆ.
ಪ್ರತಿಭಟನೆಯಲ್ಲಿ ಎಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಕಿಲೇಶ್ ಯಾದವ್ ಸೇರಿದಂತೆ ವಿವಿಧ ಪಕ್ಷಗಳ ಸಂಸದರು ಪಾಲ್ಗೊಂಡಿದ್ದರು.