ತಿರುವನಂತಪುರಂ: ಒಂದು ಕಡೆ ತಮಿಳುನಾಡಿ ಹಾಗೂ ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು, ಮತ್ತೊಂದು ಕಡೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಭಾನುವಾರ ಕೇರಳದ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಡಿಸೆಂಬರ್ 2 ರಂದು ಈ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
IMD ಯ ಇತ್ತೀಚಿನ ಅಪ್ಡೇಟ್ ಪ್ರಕಾರ, ಉತ್ತರದ ಜಿಲ್ಲೆಗಳಾದ ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರಿನಲ್ಲಿ ಸೋಮವಾರ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶ್ಶೂರ್ ಜಿಲ್ಲೆಗಳಿಗೆ “ಆರೆಂಜ್ ಅಲರ್ಟ್” ಘೋಷಿಸಿದ್ದು, ಪತ್ತನಂತಿಟ್ಟ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ರೆಡ್ಡ್ ಅಲರ್ಟ್ ಎಂದರೆ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವುದನ್ನು ಸೂಚಿಸುತ್ತದೆ. ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಅತಿ ಭಾರೀ ಮಳೆಯನ್ನು ಸೂಚಿಸುತ್ತದೆ ಮತ್ತು ಹಳದಿ ಅಲರ್ಟ್ 6 ಸೆಂ.ಮೀ ರಿಂದ 11 ಸೆಂ.ಮೀ ನಡುವೆ ಭಾರೀ ಮಳೆಯ ಬಗ್ಗೆ ಎಚ್ಚರಿಕೆ ನೀಡುತ್ತದೆ.