ಬೆಂಗಳೂರು: ನಿನ್ನೆ ಹಾಸನದಲ್ಲಿ ರಾಜ್ಯ ಕಾಂಗ್ರೆಸ್ ಘಟಕದ ವತಿಯಿಂದ ನಡೆದ ಸ್ವಾಭಿಮಾನಿ ಜನಕಲ್ಯಾಣ ಸಮಾವೇಶಕ್ಕೆ ಪರ್ಯಾಯವಾಗಿ ಜಾತ್ಯಾತೀತ ಜನತಾದಳದ ವತಿಯಿಂದ ಸಮಾವೇಶವೊಂದನ್ನು ನಡೆಸಲು ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವರಾಗಿರುವ ಜೆಡಿಎಸ್ನ ರಾಜ್ಯಾಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹೆಸರಿನಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿದುಬಂದಿದೆ.
ಕುಮಾರಸ್ವಾಮಿ ಅವರ ಜನ್ಮದಿನವಾದ ಡಿ.15ರಂದು ಮಂಡ್ಯದಲ್ಲಿ ಸಮಾವೇಶ ನಡೆಯಲಿದೆ ಎಂದು ಹೇಳಲಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ನಿನ್ನೆ ದೆಹಲಿಯಲ್ಲಿ ದೇವೇಗೌಡರೊಂದಿಗೆ ಜೆಡಿಎಸ್ ಮುಖಂಡರು ಚರ್ಚೆ ನಡೆಸಿದ್ದಾರೆ.