ಮಡಿಕೇರಿ: ಪಿಕಪ್ ವಾಹನ ಮತ್ತು ಮಹೇಂದ್ರ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಸುಂಟಿಕೊಪ್ಪ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ಪಿಕಪ್ ವಾಹನ ಮತ್ತು ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ಮಹೇಂದ್ರ ಕಾರಿನ ನಡುವೆ ಅವಘಡ ಸಂಭವಿಸಿದೆ.