ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿಗೆ ಅಧ್ಯಕ್ಷೆಯಾಗಿದ್ದ ಮಂಜುಳಾ ಅವರಿಂದ ತೆರವಾಗಿದ್ದ ಅದ್ಯಕ್ಷ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಆಯ್ಕೆಯಾಗಿದ್ದಾರೆ.
ಇವರ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಸಮಸ್ಯೆಗಳಿಗೆ ಸ್ಪಂಧಿಸಿ ಶೀಘ್ರ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಹಂತ ಹಂತವಾಗಿ ಮಾಡುವ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ, ಯಾವುದೇ ಕುಂದು ಕೊರತೆ ಉಂಟಾಗದಂತೆ ಕ್ರಮಜರುಗಿಸಲಾಗುವುದು ಎಂದರು.
ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಆಶ್ವಥ್ ನಾರಾಯಣ್ ಅವರಿಗೆ ವಿಎಸ್ಎಸ್ಎನ್ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಮಾಜಿ ಅಧ್ಯಕ್ಷ ಕೆ.ಕೆ ಆಂಜಿನಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಪುಷ್ಪ ಶಿವಕುಮಾರ್ ಸೇರಿದಂತೆ ಸದಸ್ಯರು, ಇತರರು ಪುಷ್ಪಮಾಲೆ ಹಾಕಿ ಸಿಹಿ ತಿನಿಸಿ ಅಭಿನಂದಿಸಿದರು.