ಕಲಬುರಗಿ: ಕೊಲೆ ಆರೋಪಿ ಒಬ್ಬನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಆಳಂದ ತಾಲೂಕಿನ ಮಾಡ್ಯಾಳ ಬಳಿ ನಡೆದಿದೆ.
ಗ್ರಾ.ಪಂ. ಸದಸ್ಯ ವಿಶ್ವನಾಥ್ ಜಮಾದಾರ ಎಂಬಾತನನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ, ಲಕ್ಷ್ಮಣ ಪೂಜಾರಿ ಎಂಬಾತನನ್ನು ಪೊಲೀಸರು ಬಂಧಿಸಲು ಹೋದಾಗ ಆರೋಪಿ ಹಲ್ಲೆ ನಡೆಸಲು ಮುಂದಾಗಿದ್ದಾನೆ.
ಈ ಸಂದರ್ಭದಲ್ಲಿ ಅಫ್ಜಲ್ಪುರ ಪಿಎಸ್ಐ ಸೋಮಲಿಂಗ ಒಡೆಯರ್ ಲಕ್ಷ್ಮಣ್ ಮೇಲೆ ಗುಂಡು ಹಾರಿಸಿದ್ದಾರೆ.ಆರೋಪಿ ಲಕ್ಷ್ಮಣ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಸೇರಿದಂತೆ ಕೊಲೆ ಮತ್ತಿತರರ ಪ್ರಕರಣ ಸೇರಿ ಒಟ್ಟು 12 ಪ್ರಕರಣ ದಾಖಲಾಗಿದ್ದವು ಎಂದು ಹೇಳಲಾಗಿದೆ.
ಲಕ್ಷ್ಮಣ್ ಬೆಂಗಳೂರು ಮತ್ತು ಕಲಬುರಗಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಮಾಡಲಾಗುತ್ತಿದ್ದ ಎಂಬ ಆರೋಪದ ಮೇಲೆ ಗನ್ ರಿಕವರಿಗೆ ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಆತನ ಕಾಲಿಗೆ ತಾಗಿದೆ.