ಹೈದರಾಬಾದ್: ತಿರುಪತಿ ಪ್ರಸಾದದ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬೆರೆಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಿರುವ ವಿವಾದವಿಗ ಆಂಧ್ರಪ್ರದೇಶದ ಹೈಕೋರ್ಟ್ ಮೆಟ್ಟಿಲೇರಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಅವರು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಮಲ ತಿರುಪತಿದೇವಸ್ಥಾನದಲ್ಲಿ ತಯಾರು ಮಾಡುವ ಪ್ರಸಾದ ರೂಪದ ಲಡ್ಡುವನ್ನು ಪ್ರಾಣಿಗಳ…ಕೊಬ್ಬುಬೆರೆಸಿ ತಯಾರು ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದರು.
ತಮ್ಮ ವಿರುದ್ಧ ಕೇಳಿ ಬಂದ ಆರೋಪದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ವೈಎಸ್ಆರ್ಸಿಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಚಂದ್ರಬಾಬುನಾಯ್ಡು ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಪ್ರಶ್ನಿಸಿ ಆಂಧ್ರಪ್ರದೇಶ ಹೈಕೊರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿರುವುದಾಗಿ ತಿಳಿದುಬಂದಿದೆ.