ಕೆಂಗೇರಿ: ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲದಂತೆ ಅನುದಾನವನ್ನು ಪಡೆದು ಸಂಪೂರ್ಣವಾಗಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗುತ್ತದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.
ದೊಡ್ಡಬೆಲೆ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ದೊಡ್ಡಬೆಲೆ ಮುಖ್ಯರಸ್ತೆಯ ವೃಂದಾವನ ಲೇಔಟ್ ಕೆಂಗೇರಿ ಪ್ರಾದೇಶಿಕ ಕಾರ್ಯಾಗಾರದ ಮುಂಭಾಗದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಹದಿನ್ಯೂಳು ಗ್ರಾಮ ಪಂಚಾಯತಿ ಮತ್ತು ಐದು ಬಿಬಿಎಂಪಿ ವಾರ್ಡ್ ಗಳ ಅಭಿವೃದ್ಧಿಗೆ ವಿಶೇಷವಾದ ಅನುದಾನವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನೀಡಿದ್ದಾರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಬೃಹತ್ ಪ್ರಮಾಣದ ನೀರಿನ ಪೈಪ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ.
ಜಲಜೀವನ್ ವಿಷನ್ ಅಡಿಯಲ್ಲಿ ಗ್ರಾಮಗಳ ಮನೆ ಮನೆಗೆ ನಳ ನೀರನ್ನು ನೀಡಲಾಗುತ್ತಿದೆ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ಬಂಡೇಮಠ ವಾರ್ಡ್ ಕಾಂಗ್ರೆಸ್ ಅದ್ಯಕ್ಷ ಟಿ ಪ್ರಭಾಕರ್ ಹೆಚ್ ಗೂಲ್ಲಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷ ಪಿ ನಾಗೇಶ್ ದೊಡ್ಡಬೆಲೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ನಾರಾಯಣಪ್ಪ ಹೆಚ್ ಗೂಲ್ಲಹಳ್ಳಿ ಗ್ರಾಮ ಪಂಚಾಯತಿ ಕಾಂಗ್ರೆಸ್ ಅದ್ಯಕ್ಷ ಶಿವಕುಮಾರ್ ಯೋಗಾನಂದ್ ಗ್ರಾಮ ಪಂಚಾಯತಿ ಸದಸ್ಯರಾದ ಮುನಿರಾಜ್ ನಾಗರಾಜ್ ಕೇಬಲ್ ಹರೀಶ್ ಶಾಹೀದ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.