ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು most eligible bachelor ಎನಿಸಿಕೊಂಡಿರುವ ಯುವ ರಾಜಕಾರಣಿ ಕೆಲವೇ ತಿಂಗಳಲ್ಲಿ ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ.
ತೇಜಸ್ವಿ ಅವರಿಗೆ ಹಲವಾರು ಸಂದರ್ಭಗಳಲ್ಲಿ ಮದುವೆಯ ಮಾಧ್ಯಮಗಳು ಪ್ರಶ್ನೆಗಳನ್ನು ಕೇಳುತ್ತಿದ್ದವು. ಈ ವಿಷಯದ ಬಗ್ಗೆ ಅವರು ಮಾತನಾಡಿದ್ದು ಕಡಿಮೆ. ಈಗ ತೇಜಸ್ವಿ ಸೂರ್ಯ ಅವರ ವಿವಾಹದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.
ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ವರಿಸಲಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಶಿವಶ್ರೀ ಸ್ಕಂದಪ್ರಸಾದ್, ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.
2025 ರ ಮಾರ್ಚ್ ನಲ್ಲಿ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ ವಿವಾಹ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.