ಬೆಂಗಳೂರು: ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನೆಗೆ ವಿಶೇಷ ಅತಿಥಿಯ ಆಗಮನವಾಗಿದೆ. ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅಭಿಷೇಕ್ ದಂಪತಿಗೆ ಮುದ್ದಾದ ಗಂಡು ಮಗು ಜನಿಸಿದೆ. ಇಂದು ಬೆಳಿಗ್ಗೆ ೮:೩೦ ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವಿವಾ ಅಭಿಷೇಕ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಮನೆಗೆ ಬಂದ ಮೊಮ್ಮಗುವನ್ನ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಶ್ ಎತ್ತಿ ಮುದ್ದಾಡಿದ್ದಾರೆ.
ಇನ್ನು ಆಗಲಿದ ಮಂಡ್ಯದ ಗಂಡು ಅಂಬರೀಶ್ ಅವರೇ ಮರುಜನ್ಮವನ್ನು ಪಡೆದಿದ್ದಾರೆ ಎಂದು ಅಭಿಮಾನಿಗಳು ಮಾತನ್ನಾಡುತ್ತಿದ್ದು, ಅವಿವಾ ಅಭಿಷೇಕ್ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ ಅಪ್ಪನಾದ ಅಭಿಷೇಕ್ ಅಂಬರೀಶ್
