ಢಾಕಾ: ಗಡಿ ಉದ್ವಿಗ್ನತೆ ಕುರಿತು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಭಾನುವಾರ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್ ನೀಡಿದೆ.
ಭಾರತ ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ಬಾಂಗ್ಲಾ ಗಡಿಯ ಐದು ಸ್ಥಳಗಳಲ್ಲಿ ಬೇಲಿಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಢಾಕಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ವರ್ಮಾ ಮಧ್ಯಾಹ್ನ 3:00 ಗಂಟೆಯ ಸುಮಾರಿಗೆ ಸಚಿವಾಲಯಕ್ಕೆ ಭೇಟಿ ನೀಡಿ ಚರ್ಚಿಸಿದ್ದಾರೆ.
ವಿದೇಶಾಂಗ ಕಾರ್ಯದರ್ಶಿ ಜಾಶಿಮ್ ಉದ್ದೀನ್ ಅವರೊಂದಿಗಿನ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಚರ್ಚೆಯ ಕುರಿತು ಮಧ್ಯಂತರ ಸರ್ಕಾರವು ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡದಿದ್ದರೂ, ಅಧಿಕಾರಿಗಳು ರಾಯಭಾರಿಗೆ ಸಮನ್ಸ್ ನೀಡಿರುವುದನ್ನು ಖಚಿತಪಡಿಸಿದ್ದಾರೆ.